ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಬಂಡವಾಳ ಹೂಡಿ, ಸಿಎಂ ಮನವಿ

By Staff
|
Google Oneindia Kannada News

BSY in china meet
ಬೀಜಿಂಗ್, ಸೆ. 4 : ಜಾಗತಿಕ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಬೆಂಗಳೂರಿನ ಹೆಸರು ಅಚ್ಚಳಿಯದೇ ಉಳಿದಿದೆ. ಇದಕ್ಕೆ ಅನೇಕ ಅಂಶಗಳ ಜೊತೆಗೆ ಸರಕಾರದ ಉತ್ತೇಜನ ಕೂಡ ಕಾರಣವಾಗಿದೆ. ಬಂಡವಾಳ ಹೂಡಿಕೆಗೆ ಬೇಕಾದ ಸರಕಾರದ ಧೋರಣೆ, ಉತ್ತಮ ಹವಾಮಾನ, ದೂರಸಂಪರ್ಕ ವ್ಯವಸ್ಥೆ, ಕಾನೂನು ಮತ್ತು ಸುವವಸ್ಥೆ ಹೊಂದಿರುವ ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗೆ ಮುಂದಾಗಿ ಎಂದು ಚೀನಾದ ಕೈಗಾರಿಕೋದ್ಯಮಿಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಕರೆ ನೀಡಿದ್ದಾರೆ.

ಚೀನಾ ಪ್ರವಾಸದಲ್ಲಿರುವ ಯಡಿಯೂರಪ್ಪ ಇಲ್ಲಿನ ವಾಣಿಜ್ಯೋದ್ಯಮಿಗಳ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತಾ, ನಮ್ಮ ಸರಕಾರ ಅಧಿಕಾರಕ್ಕೆ ಬಂದ ನಂತರ ಕೈಗಾರಿಕೆಗಳಿಗೆ ಉತ್ತೇಜನ ನೀಡುವ ಹಲವಾರು ಕ್ರಮಗಳನ್ನು ಕೈಗೊಂಡಿದ್ದೇವೆ. ವಿಷನ್ ಗ್ರೂಪ್ ಅನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೈಗಾರಿಕೆ ಬೆಳವಣಿಗೆಗಾಗಿ ತಯಾರಿಸಿದ ನೀಲಿ ನಕ್ಷೆಯಲ್ಲಿ ಕೈಗಾರಿಕಾ ಅಭಿವೃದ್ದಿಗೆ ಒತ್ತು ನೀಡಲಾಗಿದೆ ಎಂದು ವಿವರಿಸಿದ್ದಾರೆ.

ದೇಶದ ಅಭಿವೃದ್ದಿ ಪಥದಲ್ಲಿ ಕರ್ನಾಟಕ ಮಂಚೂಣಿಯಲ್ಲಿ ನಿಲ್ಲಲು ಅತ್ಯುತ್ತಮ ಗುಣಮಟ್ಟದ ಮಾನವ ಸಂಪನ್ಮೂಲ ಕಾರಣ ಎಂದು ಉದ್ಯಮಿಗಳಿಗೆ ವಿವರಿಸಿರುವ ಮುಖ್ಯಮಂತ್ರಿಗಳು, ಅಭಿವೃದ್ದಿ ವಿಚಾರದಲ್ಲಿ ನಮ್ಮ ರಾಜ್ಯ ದೇಶದಲ್ಲೇ ಮಂಚೂಣಿಗೆ ಬರಬೇಕೆನ್ನುವ ಗುರಿಯೊಂದಿಗೆ ಕೈಗಾರಿಕಾ ನೀತಿ ರೂಪಿಸಲಾಗಿದೆ ಎಂದು ಯಡಿಯೂರಪ್ಪ ಸಭೆಯಲ್ಲಿ ಹೇಳಿದ್ದಾರೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X