ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಖ್ಯಮಂತ್ರಿಗಳೆ ರಾಜ್ಯಪಾಲರಿಗೆ ಸಾರಿ ಕೇಳಿ

By Staff
|
Google Oneindia Kannada News

RV Deshapande
ಬೆಂಗಳೂರು, ಸೆ. 8 : ರಾಜ್ಯಪಾಲರ ವಿರುದ್ಧ ಬಿಜೆಪಿ ನಾಯಕರು ಮನಬಂದಂತೆ ಮಾತನಾಡುತ್ತಿದ್ದು ಅವರ ಘನತೆಗೆ ಧಕ್ಕೆ ತಂದಿದ್ದಾರೆ. ಸಚಿವರ ಆಡಿರುವ ಮಾತಿನಿಂದ ರಾಜ್ಯಪಾಲರ ಅವಮಾನಕ್ಕೀಡಾಗಿದ್ದು, ಈ ಕೂಡಲೇ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನರ ಕ್ಷಮೆಯಾಚಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ಒತ್ತಾಯಿಸಿದ್ದಾರೆ.

ಮಂಗಳವಾರ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ನಾಯಕರ ವರ್ತನೆ ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಅಲ್ಪಸಂಖ್ಯಾತರಿಗೆ ಸೂಕ್ತ ರಕ್ಷಣೆ ಇಲ್ಲ ಎಂಬ ಹೇಳಿಕೆಯನ್ನು ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಕ್ಕೆ ಬಿಜೆಪಿ ಸಚಿವರು, ಶಾಸಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ರಾಜ್ಯಪಾಲರು ರಾಜಕೀಯ ಮಾಡುವುದನ್ನು ಬಿಡಬೇಕು. ರಾಜ್ಯಪಾಲರು ಈ ರೀತಿ ಹೇಳಿಕೆ ನೀಡುವುದು ಸಮಂಜಸವಲ್ಲ. ಸಮಸ್ಯೆಗಳಿದ್ದರೆ ನೇರವಾಗಿ ಮುಖ್ಯಮಂತ್ರಿಯವರಿಗೆ ಪತ್ರ ಬರೆಯಬಹುದಿತ್ತು. ಮಾಧ್ಯಮಗಳಿಗೆ ಹೇಳಿಕೆ ನೀಡುವ ಅಗತ್ಯವಿರಲಿಲ್ಲ ಎಂದು ಅವರು ಅಸಮಾಧಾನ ಬಿಜೆಪಿ ವಲಯದ ಮಾತಾಗಿದೆ.

ಬೇರೆ ರಾಜ್ಯಕ್ಕೆ ಹೋಲಿಸಿದರೆ, ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ. ಅಲ್ಪಸಂಖ್ಯಾತರು ನೆಮ್ಮದಿಯಿಂದ ಇದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 15 ತಿಂಗಳು ಕಳೆದಿವೆ. ಯಾವುದೇ ಕೋಮುಗಲಭೆ ಸಂಭವಿಸಿಲ್ಲ ಎಂದು ಕಾರ್ಮಿಕ ಮಂತ್ರಿ ಬಿ ಎನ್ ಬಚ್ಚೇಗೌಡ ತಿಳಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X