ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೃಷಿ ಯುವ ಪೀಳಿಗೆಯನ್ನು ಆಕರ್ಷಿಸಲಿ: ಸಿದ್ದು

By Staff
|
Google Oneindia Kannada News

Siddu: Shortfall of 20 pc in food production
ಬೆಂಗಳೂರು, ಸೆ.12: ಅವೈಜ್ಞಾನಿಕ ಕೃಷಿ ಪದ್ಧತಿಯಿಂದ ಹಾಗೂ ಮಳೆಯ ಅಭಾವದಿಂದ ಈ ವರ್ಷ ರಾಜ್ಯದಲ್ಲಿ ಆಹಾರದ ಉತ್ಪಾದನೆ ಶೇ.20ರಷ್ಟು ಕಡಿಮೆಯಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಚ್ಚರಿಸಿದರು. ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬಗ್ಗೆ ವಿಧಾನಸಭೆಯಲ್ಲಿ ಅವರು ಶುಕ್ರವಾರ ಮೂರು ತಾಸಿಗೂ ಹೆಚ್ಚು ಕಾಲ ಮಾತನಾಡಿದರು.

ರಾಜ್ಯದ 20 ಜಿಲ್ಲೆಗಳಲ್ಲಿ ಬರ ಇದೆ. ಗ್ರಾಮೀಣ ಪ್ರದೇಶದಲ್ಲಿ ಉದ್ಯೋಗ ಒದಗಿಸುವ ಅನಿವಾರ್ಯತೆ ಒದಗಿದೆ. ಮಳೆಯ ಅಭಾವದಿಂದಾಗಿ 13 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಕಾರ್ಯ ನಡೆದಿಲ್ಲ. ಅವೈಜ್ಞಾನಿಕ ಕೃಷಿ ಪದ್ಧತಿಯಿಂದ 20 ಲಕ್ಷ ಹೆಕ್ಟೇರ್ ನಷ್ಟು ಭೂಮಿ ನಿರುಪಯುಕ್ತವಾಗಿದೆ ಎಂದು ಅವರು ತಿಳಿಸಿದರು. ಹಾಗಾಗಿ ಈ ವರ್ಷದ ಆಹಾರ ಉತ್ಪಾದನೆಯಲ್ಲಿ ಶೇ.20ರಷ್ಟು ಕಡಿಮೆಯಾಗಿದೆ.

ಆಹಾರ ಧಾನ್ಯಗಳ ಉತ್ಪಾದನೆಯಲ್ಲಿ ಏರಿಕೆಯಾಗುತ್ತಿಲ್ಲ. ಇದನ್ನು ಹೆಚ್ಚಿಸುವ ಅಗತ್ಯ ಕ್ರಮಗಳನ್ನು ಕೈಗೊಳ್ಳದಿದ್ದರೆ ಮುಂದಿನ ದಿನಗಳು ಕಷ್ಟಕರವಾಗಲಿದೆ ಎಂದು ಅವರು ಸಭೆಗೆ ತಿಳಿಸಿದರು. ಯುವ ಪೀಳಿಗೆಗೆ ಬೇಸಾಯವನ್ನು ಆಕರ್ಷಕ ಹಾಗೂ ಲಾಭದಾಯಕ ಅನ್ನಿಸುವ ರೀತಿಯಲ್ಲಿ ಮಾಡಬೇಕಾಗಿದೆ. ಆಗ ಕೃಷಿಯನ್ನು ನೆಚ್ಚಿಕೊಳ್ಳುವ ಧೈರ್ಯ ಮಾಡುತ್ತಾರೆ. ಇಲ್ಲದೆ ಹೋದರೆ ನಗರಗಳಿಗೆ ವಲಸೆ ಬರುವುದನ್ನು ತಪ್ಪಿಸಲು ಸಾಧ್ಯವಾಗುವುದಿಲ್ಲ ಎಂದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X