ವೆಚ್ಚಕ್ಕೆ ಕಡಿವಾಣ : ಈಗ ಸೋನಿಯಾ ಸರದಿ

Sonia Gandhi
ನವದೆಹಲಿ, ಸೆ. 14 : ಆರ್ಥಿಕ ಮಿತವ್ಯಯ ಉದ್ದೇಶದಿಂದ ವಿಮಾನದಲ್ಲಿ ಸಾಮಾನ್ಯ ದರ್ಜೆಯಲ್ಲಿ ಸಂಚರಿಸಿ ಪ್ರಣಬ್ ಮುಖರ್ಜಿ ಮಾದರಿಯಾದ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸೋನಿಯಾ ಗಾಂಧಿ ಕೂಡಾ ರಾಜಧಾನಿಯಿಂದ ಮುಂಬೈಗೆ ವಿಮಾನದ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸಿ ದುಂದು ವೆಚ್ಚಕ್ಕೆ ಕಡಿವಾಣ ಹಾಕಲಿದ್ದಾರೆ.

ಮುಂಬೈನಲ್ಲಿ ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಹಿನ್ನೆಲೆಯಲ್ಲಿ ಸೋನಿಯಾ ಗಾಂಧಿ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ದೇಶ ಬರ ಹಾಗೂ ಆರ್ಥಿಕ ಕುಸಿತದಿಂದ ತೀವ್ರ ಸಂಕಷ್ಟದ ಸ್ಥಿತಿ ಎದುರಿಸುತ್ತಿದೆ. ಈ ಸಂದರ್ಭದಲ್ಲಿ ಸರಕಾರ ದುಂದು ವೆಚ್ಚಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಚಿಂತನೆ ನಡೆಸಿತ್ತು. ಈ ಕುರಿತು ಅಧಿಕೃತವಾಗಿ ಹೇಳಿಕೆ ನೀಡಿದ್ದ ಹಣಕಾಸು ಸಚಿವ ಪ್ರಣಬ್ ಮುಖರ್ಜಿ, ಅವರು ಸ್ವತಃ ವಿಮಾನದ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸಿ ಮಾದರಿಯಾಗಿದ್ದರು.

ಮುಖರ್ಜಿ ಅವರನ್ನು ಅನೇಕ ಸಚಿವರು ಅನುಸರಿಸಿದ್ದು, ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ ಕೂಡಾ ಸಾಮಾನ್ಯ ದರ್ಜೆಯಲ್ಲಿ ಪ್ರಯಾಣಿಸುವುದಾಗಿ ಹೇಳಿದ್ದಾರೆ. ಪಂಚತಾರಾ ಹೋಟೆಲ್ ನಲ್ಲಿ ವಾಸ್ತವ್ಯ ಹೂಡಿದ್ದ ಎಸ್ ಎಂ ಕೃಷ್ಣ ಮತ್ತು ಅವರ ಸಹಾಯಕ ಸಚಿವ ಶಶಿ ತರೂರ್ ಅವರು ಸರಕಾರಿ ಬಂಗಲೆಯಲ್ಲಿ ವಾಸ್ತವ್ಯ ಹೂಡುವಂತೆ ಪ್ರಣಬ್ ಸೂಚನೆ ನೀಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+