ಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ

ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ಎಸ್ ಕೆ ಎಸ್ ಜಿಟಿ ಕಾಲೇಜಿನಲ್ಲಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಂಗಳವಾರ ಮಾತನಾಡಿ, ರಾಜ್ಯದ ಉನ್ನತ ಶಿಕ್ಷಣ ಸುಧಾರಣೆ ದೃಷ್ಟಿಯಿಂದ ಐಐಟಿ ತೀರಾ ಅಗತ್ಯ ಎಂದು ಸಚಿವರು ಪ್ರತಿಪಾದಿಸಿದರು. ಕೆಲ ದಿನಗಳ ಹಿಂದೆ ವಿಶ್ವೇಶ್ವರಯ್ಯ ಅವರ ಜನ್ಮಸ್ಥಳ ಮುದ್ದೇನಹಳ್ಳಿಗೆ ಭೇಟಿ ನೀಡಲಾಗಿತ್ತು. ಅಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಘಟಕ ಆರಂಭಿಸಲು 200 ಎಕರೆ ಪ್ರದೇಶವನ್ನು ಪರಿಶೀಲಿಸಲಾಗಿದೆ. ಎಲ್ಲ ಎಂಜನಿಯರಿಂಗ್ ಪದವಿ ವ್ಯಾಸಂಗ ಹಾಗೂ ಸಂಶೋಧನೆಗೆ ಅವಕಾಶ ಮಾಡಿಕೊಡುವ ಉದ್ದೇಶವಿದೆ ಎಂದು ಲಿಂಬಾವಳಿ ಹೇಳಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications