ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುದ್ದೇನಹಳ್ಳಿಯಲ್ಲಿ ತಾಂತ್ರಿಕ ವಿವಿ ಸ್ಥಾಪನೆ : ಲಿಂಬಾವಳಿ

By Staff
|
Google Oneindia Kannada News

Aravind limbavali
ಬೆಂಗಳೂರು, ಸೆ. 16 : ರಾಜ್ಯಕ್ಕೆ ಐಐಟಿ ತಂದೇ ತರುವುದಾಗಿ ಉನ್ನತ ಶಿಕ್ಷಣ ಸಚಿವ ಅರವಿಂದ ಲಿಂಬಾವಳಿ ಹೇಳಿದ್ದಾರೆ. ಕರ್ನಾಟಕದಲ್ಲಿ ಭಾರತೀಯ ವಿಜ್ಞಾನ ಕೇಂದ್ರ ಇರುವುದರಿಂದ ಐಐಟಿ ಕೊಡುವುದಿಲ್ಲ ಎಂದು ಕೇಂದ್ರದ ಮಾನವ ಸಂಪನ್ಮೂಲ ಖಾತೆ ರಾಜ್ಯ ಸಚಿವೆ ಪುರಂದರೇಶ್ವರಿ ಹೇಳಿದ್ದಾರೆ. ಆದರೆ, ಐಐಟಿ ತಂದು ಕೇಂದ್ರ ಸಚಿವೆ ಕೈಯಿಂದಲೇ ಉದ್ಘಾಟನೆ ಮಾಡಿಸಲಾಗುವುದು ಎಂದರು.

ಭಾರತರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಪ್ರಯುಕ್ತ ಎಸ್ ಕೆ ಎಸ್ ಜಿಟಿ ಕಾಲೇಜಿನಲ್ಲಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಂಗಳವಾರ ಮಾತನಾಡಿ, ರಾಜ್ಯದ ಉನ್ನತ ಶಿಕ್ಷಣ ಸುಧಾರಣೆ ದೃಷ್ಟಿಯಿಂದ ಐಐಟಿ ತೀರಾ ಅಗತ್ಯ ಎಂದು ಸಚಿವರು ಪ್ರತಿಪಾದಿಸಿದರು. ಕೆಲ ದಿನಗಳ ಹಿಂದೆ ವಿಶ್ವೇಶ್ವರಯ್ಯ ಅವರ ಜನ್ಮಸ್ಥಳ ಮುದ್ದೇನಹಳ್ಳಿಗೆ ಭೇಟಿ ನೀಡಲಾಗಿತ್ತು. ಅಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿ ಘಟಕ ಆರಂಭಿಸಲು 200 ಎಕರೆ ಪ್ರದೇಶವನ್ನು ಪರಿಶೀಲಿಸಲಾಗಿದೆ. ಎಲ್ಲ ಎಂಜನಿಯರಿಂಗ್ ಪದವಿ ವ್ಯಾಸಂಗ ಹಾಗೂ ಸಂಶೋಧನೆಗೆ ಅವಕಾಶ ಮಾಡಿಕೊಡುವ ಉದ್ದೇಶವಿದೆ ಎಂದು ಲಿಂಬಾವಳಿ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X