ಕಲ್ಯಾಣ ಕರ್ನಾಟಕ ಎನ್ನುವುದು ಬೆಸ್ಟ್ : ಸಿಎಂ

ನಗರದಲ್ಲಿ ಇಂದು ಹೈದಾರಾಬಾದ್ ಕರ್ನಾಟರ ವಿಮೋಚನಾ ದಿನಾಚರಣೆ ದ್ವಜಾರೋಹಣ ಮಾಡಿದ ನಂತರ ಅವರು ಮಾತನಾಡುತ್ತಿದ್ದರು. ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಬೇಕು ಎನ್ನುವುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಬಗ್ಗೆ ಈ ಭಾಗದ ಶಾಸಕರು, ಸಚಿವರು, ಕೇಂದ್ರ ಸಚಿವರು ಹಾಗೂ ಸ್ವಾತಂತ್ರ ಹೋರಾಟಗಾರರು ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಅವರು ವಿವರಿಸಿದರು. ಹೈದರಾಬಾದ್ ಕರ್ನಾಟಕದ ವಿಮೋಚನಾ ಹೋರಾಟವನ್ನು ಪಠ್ಯದಲ್ಲಿ ಸೇರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು.
ಇತ್ತ ಕೊಪ್ಪಳದಲ್ಲಿ ಜಿಲ್ಲಾ ಉಸ್ತವಾರಿ ಸಚಿವ ಗೋವಿಂದ ಕಾರಜೋಳ ಮತ್ತು ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ರೇವೂ ನಾಯಕ್ ಬೆಳಮಗಿ ಅವರ ಕೊಪ್ಪಳ ಮತ್ತು ಬೀದರ್ ನಲ್ಲಿ ಧ್ವಜಾರೋಹಣ ನೆರವೇರಿಸಿದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications