ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗುಲಬರ್ಗಾದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ

By Staff
|
Google Oneindia Kannada News

ಗುಲಬರ್ಗಾ, ಸೆ. 21 : ಎರಡನೇ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ ಇದೇ ತಿಂಗಳ 23 ಹಾಗೂ 24ರಂದು ಗುಲಬರ್ಗಾದಲ್ಲಿ ನಡೆಯಲಿದೆ. ಸೆಪ್ಟೆಂಬರ್ 23ರ ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಮ್ಮೇಳನ ಉದ್ಘಾಟಿಸಲಿದ್ದಾರೆ.

'ಮನುಕುಲದ ಒಳಿತಿಗಾಗಿ ವಿಜ್ಞಾನ-ತಂತ್ರಜ್ಞಾನ' ಈ ಸಮ್ಮೇಳನದ ಪ್ರಮುಖ ವಿಷಯ. ಎರಡು ದಿನಗಳ ಅವಧಿಯಲ್ಲಿ ಈ ವಿಷಯದ ವಿವಿಧ ಆಯಾಮಗಳಿಗೆ ಸಂಬಂಧಿಸಿದ ಅನೇಕ ವಿಚಾರಸಂಕಿರಣಗಳು ನಡೆಯಲಿವೆ. ಪ್ರೊ ಯು.ಆರ್. ರಾವ್, ಪ್ರೊ ಪಿ. ಬಲರಾಂ, ಪ್ರೊ ಎಂ.ಐ. ಸವದತ್ತಿ, ಪ್ರೊ ರೊದ್ದಂ ನರಸಿಂಹ, ಡಾ ವಿ. ಪ್ರಕಾಶ್, ಡಾ ಪಿ.ಎಸ್. ಶಂಕರ್, ಪತ್ರಕರ್ತ ನಾಗೇಶ ಹೆಗಡೆ - ಇವರು ಭಾಷಣಕಾರರಲ್ಲಿ ಪ್ರಮುಖರು.

ಸಮ್ಮೇಳನದಲ್ಲಿ ವಸ್ತುಪ್ರದರ್ಶನ ಆಯೋಜಿಸಲಾಗಿದೆ. ಇದೇ ಸಂದರ್ಭದಲ್ಲಿ 'ವಿಜ್ಞಾನ ಲೋಕ' ಪತ್ರಿಕೆಯ ವಿಶೇಷ ಸಂಚಿಕೆಯನ್ನೂ ಹೊರತರಲಾಗುವುದು.

ಸಮ್ಮೇಳನದಲ್ಲಿ ಭಾಗವಹಿಸಲು ಯಾವುದೇ ನೋಂದಣಿ ಶುಲ್ಕ ಇಲ್ಲ. ಹೆಚ್ಚಿನ ವಿವರಗಳಿಗೆ ಸಮ್ಮೇಳನದ ಸಂಘಟನಾ ಕಾರ್ಯದರ್ಶಿಯವರನ್ನು [email protected] ವಿಳಾಸದಲ್ಲಿ ಸಂಪರ್ಕಿಸಬಹುದು.

(ದಟ್ಸ್ ಕನ್ನಡ ಸಭೆ ಸಮಾರಂಭ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X