ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನ್ಯಾಯಾಲಯದ ಮುಂದೆ ಹಾಜರಾದ ಸಂಪಂಗಿ

By Staff
|
Google Oneindia Kannada News

Y Sampangi
ಬೆಂಗಳೂರು, ಸೆ 23: ಲೋಕಾಯುಕ್ತ ವಿಶೇಷ ನ್ಯಾಯಾಲಯದ ಮುಂದೆ ಲಂಚ ಪ್ರಕರಣದ ಕಳಂಕ ಹೊತ್ತಿರುವ ಕೆಜಿಎಫ್ ಶಾಸಕ ವೈ ಸಂಪಂಗಿ ಮಂಗಳವಾರ (ಸೆ 22) ಹಾಜರಾದರು. ವಾದ ವಿವಾದಗಳನ್ನು ಆಲಿಸಿದ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಹಿಪ್ಪರಗಿ ವಿಚಾರಣೆಯನ್ನು ಅಕ್ಟೋಬರ್ 30ಕ್ಕೆ ಮುಂದೂಡಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಲ್ ಇನ್ಸ್ಪೆಕ್ಟರ್ ಮತ್ತು ಸಬ್ ಇನ್ಸ್ಪೆಕ್ಟರ್ ವಿರುದ್ದ ಕೂಡ ಆರೋಪ ಪಟ್ಟಿ ಸಲ್ಲಿಸಲು ಅನುಮತಿ ನೀಡುವಂತೆ ಲೋಕಾಯುಕ್ತ ಪರ ವಕೀಲರು ನ್ಯಾಯಾಧೀಶರ ಮುಂದೆ ಮನವಿ ಮಾಡಿದರು. ಮಾಧ್ಯಮದವರ ಮುಂದೆ ತಪ್ಪಿಸಿಕೊಳ್ಳಲು ಸಂಪಂಗಿ ನ್ಯಾಯಾಲಯದ ಹಿಂಬಾಗಿಲಿಂದ ಹೊರ ನಡೆದರು. ಜನವರಿ 29ರಂದು ಫರೂಕ್ ಎಂಬುವವರಿಂದ ಸುಮಾರು 50 ಸಾವಿರ ಲಂಚ ಸ್ವೀಕರಿಸುತ್ತಿದ್ದ ಶಾಸಕ ಸಂಪಂಗಿ ಅವರನ್ನು ಶಾಸಕರ ಭವನದಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು.

(ದಟ್ಸ್ ಕನ್ನಡವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X