ಸುತ್ತೂರು ಮಠದಲ್ಲಿ ಸಚಿವರುಗಳ ಸಭೆ

Dhananjay Kumar
ಬೆಂಗಳೂರು ಸೆ 23: ಸರಕಾರದ ಕಾರ್ಯ ನಿರ್ವಹಣೆ ಬಗ್ಗೆ ಮುಕ್ತವಾಗಿ ಚರ್ಚಿಸಲು ಮೈಸೂರಿನ ಸುತ್ತೂರು ಮಠದಲ್ಲಿ ಸೆಪ್ಟೆಂಬರ್ 29ರಿಂದ ಮೂರು ದಿನ ಸಚಿವರುಗಳ ಸಭೆ ನಡೆಯಲಿದೆ ಎಂದು ರಾಜ್ಯ ಸರಕಾರದ ದೆಹಲಿ ಪ್ರತಿನಿಧಿ ಧನಂಜಯ ಕುಮಾರ್ ತಿಳಿಸಿದ್ದಾರೆ.

ಸೆ 29, 30 ಮತ್ತು ಅ 1ರಂದು ನಡೆಯುವ ಸಭೆಯಲ್ಲಿ ಅರುಣ್ ಜೇಟ್ಲಿ, ಅನಂತ್ ಕುಮಾರ್, ನರೇಂದ್ರ ಮೋದಿ, ಯಡಿಯೂರಪ್ಪ ಸೇರಿದಂತೆ ರಾಜ್ಯದ ಎಲ್ಲಾ ಸಚಿವರು ಭಾಗವಹಿಸಲಿದ್ದಾರೆ. ಸರಕಾರದ ಕಾರ್ಯ ಶೈಲಿ ಮತ್ತು ಇಲಾಖೆಗಳ ಪ್ರಗತಿ ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲು ಸಭೆ ಸಹಕಾರಿಯಾಗಲಿದೆ ಎಂದು ಧನಂಜಯ ಕುಮಾರ್ ಹೇಳಿದ್ದಾರೆ.

ಪ್ರತಿಪಕ್ಷಗಳ ವಿರುದ್ಧ ಕಿಡಿಕಾರಿದ ಧನಂಜಯ ಕುಮಾರ್, ಜೆಡಿಎಸ್ ಮುಖಂಡ ರೇವಣ್ಣ ಅವರಿಗೆ ಪ್ರಾಥಮಿಕ ಜ್ಞಾನವಿಲ್ಲ. ಸಚಿವ ಕರುಣಾಕರ ರೆಡ್ಡಿ ಅವರ ವಿರುದ್ದ ಬಾಲಿಶ ಹೇಳಿಕೆ ನೀಡುತ್ತಿದ್ದಾರೆ. ತನಿಖೆಯಿಂದ ಕಲ್ಲಿದ್ದಲು ಹಗರಣದ ನಿಜಾಂಶ ಹೊರ ಬರಲಿದೆ. ಪ್ರತಿಪಕ್ಷಗಳು ಸರಕಾರವನ್ನು ಟೀಕಿಸುವುದರಲ್ಲೇ ಕಾಲ ಕಳೆಯುತ್ತಿದೆಯೆಂದು ಹೇಳಿದ್ದಾರೆ.

(ದಟ್ಸ್ ಕನ್ನಡವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+