ಶಾಸ್ತ್ರೀಯ ಸ್ಥಾನಮಾನ : ರಿಟ್ ಅರ್ಜಿ ಶೀಘ್ರ ಹಿಂದಕ್ಕೆ

ಈ ಕುರಿತು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ರಾಜ್ಯ ಸರಕಾರದ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ, ತಮಿಳುನಾಡಿನ ಅಡ್ವೋಕೇಟ್ ಜನರಲ್ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಕೂಡಲೇ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುವ ಭರವಸೆ ಅಲ್ಲಿನ ಸರಕಾರ ನೀಡಿದೆ ಎಂದರು. ಕನ್ನಡ ಶಾಸ್ತ್ರೀಯ ಸ್ಥಾನಮಾನ ನೀಡಲು ಮುಂದಾಗಿರುವ ಕೇಂದ್ರ ಸರಕಾರದ ವಿರುದ್ಧ ತಮಿಳರು ಅಡ್ಡಪಡಿಸುತ್ತಿದ್ದಾರೆ ಎಂಬ ಅಂಶದಿಂದ ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ನಡೆಸುವುದು ಸಾಮಾನ್ಯವಾಗಿದೆ.
ಕನ್ನಡಕ್ಕೆ ಶಾಸ್ತ್ರೀಯ ಭಾಷೆ ಸ್ಥಾನಮಾನ ವಿರೋಧಿಸಿ ವಕೀಲ ಆರ್ ಗಾಂಧಿ ಸಲ್ಲಿಸಿರುವ ರಿಟ್ ಅರ್ಜಿಯನ್ನು ಹಿಂದಕ್ಕೆ ಪಡೆಯುವಂತೆ ಮನವೊಲಿಸಲಾಗುವುದು ಎಂಜು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಈ ಹಿಂದೆ ಹೇಳಿಕೆ ನೀಡಿದ್ದರು.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications