ಧಾರ್ಮಿಕ ಕೇಂದ್ರ ನಿರ್ಮಾಣಕ್ಕೆ ಕಡಿವಾಣ

ನ್ಯಾಯಮೂರ್ತಿ ದಲ್ವೀರ್ ಬಂಡಾರಿ ಮತ್ತು ನ್ಯಾಯಮೂರ್ತಿ ಮುಕುಂದಕಮ್ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಯಾವುದೇ ಜನಾಂಗದವರು ಸಾರ್ವಜನಿಕ ಸ್ಥಳಗಳಲ್ಲಿ ಮಂದಿರ, ಮಸೀದಿ, ಚರ್ಚ್ ಮತ್ತು ಗುರುದ್ವಾರದಂತಹ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯ ಅವರಿಗೆ ಸೂಚನೆ ನೀಡಿರುವ ಅಪೆಕ್ಸ್ ಕೋರ್ಟ್, ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದೆ.
(ಏಜನ್ಸೀಸ್)












Click it and Unblock the Notifications