ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಧಾರ್ಮಿಕ ಕೇಂದ್ರ ನಿರ್ಮಾಣಕ್ಕೆ ಕಡಿವಾಣ

By Staff
|
Google Oneindia Kannada News

Supreme court
ನವದೆಹಲಿ, ಸೆ. 29 : ಸಾರ್ವಜನಿಕ ಸ್ಥಳದಲ್ಲಿ ಧಾರ್ಮಿಕ ಕೇಂದ್ರಗಳನ್ನು ನಿರ್ಮಾಣ ಮಾಡುವುದಕ್ಕೆ ಸುಪ್ರಿಂಕೋರ್ಟ್ ನಿರ್ಬಂಧ ಹೇರಿದೆ.

ನ್ಯಾಯಮೂರ್ತಿ ದಲ್ವೀರ್ ಬಂಡಾರಿ ಮತ್ತು ನ್ಯಾಯಮೂರ್ತಿ ಮುಕುಂದಕಮ್ ಶರ್ಮಾ ಅವರನ್ನೊಳಗೊಂಡ ವಿಭಾಗೀಯ ಪೀಠ ಈ ಮಹತ್ವದ ಆದೇಶ ನೀಡಿದ್ದು, ಯಾವುದೇ ಜನಾಂಗದವರು ಸಾರ್ವಜನಿಕ ಸ್ಥಳಗಳಲ್ಲಿ ಮಂದಿರ, ಮಸೀದಿ, ಚರ್ಚ್ ಮತ್ತು ಗುರುದ್ವಾರದಂತಹ ಧಾರ್ಮಿಕ ಕೇಂದ್ರಗಳನ್ನು ನಿರ್ಮಿಸಬಾರದು ಎಂದು ಮಧ್ಯಂತರ ಆದೇಶ ನೀಡಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾಯಪೀಠ ಈ ಮಹತ್ವದ ತೀರ್ಪು ನೀಡಿದೆ. ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣ್ಯ ಅವರಿಗೆ ಸೂಚನೆ ನೀಡಿರುವ ಅಪೆಕ್ಸ್ ಕೋರ್ಟ್, ಮುಂದಿನ ದಿನಗಳಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕೇಂದ್ರಗಳ ನಿರ್ಮಾಣಕ್ಕೆ ಅವಕಾಶ ಕೊಡಬಾರದು ಎಂದು ಹೇಳಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X