ಯಡಿಯೂರಪ್ಪಗೆ ಯಾವುದರಲ್ಲಿ ಹೊಡೆಯಬೇಕು, ಸಿದ್ದು

Siddaramaiah
ಬೆಂಗಳೂರು, ಸೆ. 29 : ಮೀತಿಮೀರಿದ ಸೃಜವ ಪಕ್ಷಪಾತ, ಆಡಳಿತ ವೈಫಲ್ಯ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಈಗ ಜನರು ಯಾವುದರಲ್ಲಿ ಹೊಡಿಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಜನವಿರೋಧಿ ನೀತಿ ಅನುಸರಿಸುತ್ತಿರುವ ಆಡಳಿತ ಪಕ್ಷವನ್ನು ಜನರೇ ಬಡಿಗೆ ತೆಗೆದುಕೊಂಡು ಹೊಡೀತಾರೆ ಎಂದು ಪ್ರತಿಪಕ್ಷದ ನಾಯಕರಾಗಿದ್ದ ಸಂದರ್ಭದಲ್ಲಿ ಯಡಿಯೂರಪ್ಪ ಹೇಳಿದ್ದರು. ಇದೀಗ ಹಿಂದಿನ ಎಲ್ಲ ಸರಕಾರಗಳಿಗಿಂತ ಕೆಟ್ಟ ಆಡಳಿತ ನೀಡುತ್ತಿರುವ ಯಡಿಯೂರಪ್ಪ ಅವರನ್ನು ಜನ ಏನು ತೆಗೆದುಕೊಂಡು ಹೊಡೆಯಬೇಕು ಎಂದು ಮಾಧ್ಯಮಗೋಷ್ಠಿಯಲ್ಲಿ ಅವರು ಪ್ರಶ್ನಿಸಿದರು.

ಧರ್ಮಸಿಂಗ್ ಅವರು ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದಲ್ಲಿ ಪ್ರತಿಪಕ್ಷದ ಶಾಸಕರು ವಿಧಾನಸೌಧ ಆವರಣದ ಕೆಂಗಲ್ ಹನುಮಂತಯ್ಯ ಪ್ರತಿಮೆ ಬಳಿ ಪ್ರತಿಭಟನೆ ನಡೆಸಲು ಅವಕಾಶ ಕಲ್ಪಿಸಲಾಗಿತ್ತು. ಯಡಿಯೂರಪ್ಪ ಅವರು ಅಧಿಕಾರ ಮದದಿಂದ ಇದನ್ನು ಮರೆತಿದ್ದಾರೆ. ಪ್ರಜಾಸತ್ತಾತ್ಮಕವಾಗಿ ಪ್ರತಿಪಕ್ಷಗಳು ಪ್ರತಿಭಟನೆಗೆ ಮುಂದಾದರೆ ಅವರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಯಡಿಯೂರಪ್ಪ ಅವರ ದರ್ಪ, ದೌರ್ಜನ್ಯ ಹೆಚ್ಚು ದಿನ ನಡೆಯುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+