ಬೋಫೋರ್ಸ್ ಪ್ರಕರಣಕ್ಕೆ 'ಕೃಷ್ಣಾರ್ಪಣ'

ಎರಡು ದಶಕಗಳಸ್ಟು ಹಳೆಯದಾದ ಬೋಫೋರ್ಸ್ ಪ್ರಕರಣಕ್ಕೆ ಸಂಬಂಧಿಸಿ ಕ್ವಟ್ರೋಕಿ ವಿರುದ್ದ ಯಾವುದೇ ಸಾಕ್ಷ್ಯಾಧಾರಗಳು ಇಲ್ಲದಿರುವುದರಿಂದ ಅವರ ವಿರುದ್ದ ದಾಖಲಿಸಿದ್ದ ಎಲ್ಲಾ ಪ್ರಕರಣಗಳನ್ನು ವಾಪಾಸ್ ತೆಗೆದುಕೊಳ್ಳುತ್ತಿರುವುದಾಗಿ ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಾಲಕೃಷ್ಣನ್ ಅವರನ್ನೊಳಗೊಂಡ ಪೀಠಕ್ಕೆ ತಿಳಿಸಿದೆ.
ಸೋನಿಯಾ ಗಾಂಧಿ ಕುಟುಂಬ ಸ್ನೇಹಿತರಾಗಿರುವ ಕ್ವಟ್ರೋಕಿ ವಿರುದ್ದ ಯಾವುದೇ ಸಾಕ್ಷ್ಯಾಧಾರಗಳು ಇಲ್ಲ. ಅವರ ಸ್ವಿಸ್ ಬ್ಯಾಂಕ್ ಖಾತೆಗಳ ಮುಟ್ಟುಗೋಲನ್ನು ತೆರವುಗೊಳಿಸಲಾಗಿದೆ. ಕಾನೂನು ಬಾಹಿರವಾಗಿ ಸಂಪಾದಿಸಿದ ಹಣವನ್ನು ಈಗಾಗಲೇ ವಾಪಸ್ ಪಡೆಯಲಾಗಿದೆ ಎಂದು ಕೇಂದ್ರ ಸರಕಾರ ಸುಪ್ರೀಂಕೋರ್ಟ್ ಗೆ ತಿಳಿಸಿದೆ.
(ಏಜನ್ಸೀಸ್)












Click it and Unblock the Notifications