ಬಿಜಾಪುರ : ಭಾರೀ ಮಳೆಗೆ ನಾಲ್ಕು ಸಾವು

ನಗರದ ವಡ್ಡರಕಾಲೋನಿಯಲ್ಲಿ ಮನೆ ಕುಸಿತದಿಂದ ಒಬ್ಬರು ಸಾವನ್ನಪ್ಪಿದ್ದಾರೆ. ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನಲ್ಲಿ ಮನೆಕುಸಿತದ ಪರಿಣಾಮ ಮೂರು ಜನ ಸಾವನ್ನಪ್ಪಿರುವ ವರದಿಯಾಗಿದೆ. ಗುಲ್ಬರ್ಗ ಜಿಲ್ಲೆಯಲ್ಲಿ ಪ್ರವಾಹ ಬಂದಿದ್ದರಿಂದ ಹಳ್ಳ ದಾಟುತ್ತಿದ್ದ ರೈತ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ.
ಬದಾಮಿಯಲ್ಲಿ ಅಗಸ್ತ್ಯತೀರ್ಥ ತುಂಬಿ ಹರಿಯುತ್ತಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಎಲ್ಲಾ ಕೆರೆಗಳು ಭರ್ತಿಯಾಗಿದ್ದು ಅಪಾಯದ ಅಂಚಿನಲ್ಲಿದೆ. ಬಳ್ಳಾರಿ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ಭಾರಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈರುಳ್ಳಿ, ಸೂರ್ಯಕಾಂತಿ ಮುಂತಾದ ಬೆಳೆಗಳು ನೀರು ಪಾಲಾಗಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications