ಕಾಂಗ್ರೆಸ್ಸಿಗೆ ಮಹಿಮಾ ಪಟೇಲ್ ಸೇರ್ಪಡೆ

ಬಳಿಕ ಮಾತನಾಡಿದ ಮಹಿಮಾ ಪಟೇಲ್, ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ತೊರೆದು ಸ್ವರ್ಣಯುಗ ಪಕ್ಷ ಸ್ಥಾಪಿಸಿದೆ. ಚುನಾವಣೆಗೂ ಸ್ಪರ್ಧಿಸಿದೆ. ಆದರೆ, ಯಶ ಸಿಗಲಿಲ್ಲ. ಈಗ ಕಾಂಗ್ರೆಸ್‌ನಲ್ಲಿ ಸ್ವರ್ಣಯುಗ ವಿಲೀನಗೊಳಿಸಿದ್ದೇನೆ. ಕಾಂಗ್ರೆಸ್‌ನಿಂದ ದೇಶಕ್ಕೆ ಉತ್ತಮ ಭವಿಷ್ಯವಿದೆ ಎಂದು ಈ ತೀರ್ಮಾನ ತೆಗೆದುಕೊಂಡಿದ್ದೇನೆ ಎಂದರು.
ಮಹಿಮಾ ಪಟೇಲ್ ಅವರನ್ನು ಮುಕ್ತ ಮನಸ್ಸಿನಿಂದ ಪಕ್ಷಕ್ಕೆ ಬರ ಮಾಡಿಕೊಳ್ಳುತ್ತಿದ್ದೇವೆ. ಈಗ ಅವರ ಕೆಲ ಬೆಂಬಲಿಗರಷ್ಟೇ ಸೇರಿದ್ದಾರೆ. ಈ ತಿಂಗಳಾಂತ್ಯದಲ್ಲಿ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ನಡೆಸಲಾಗುವುದು ಎಂದು ದೇಶಪಾಂಡೆ ತಿಳಿಸಿದರು. ವಿಧಾನ ಪರಿಷತ್ ಪ್ರತಿಪಕ್ಷ ನಾಯಕ
ವಿ.ಎಸ್.ಉಗ್ರಪ್ಪ, ಕಾರ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್, ವಡ್ನಾಳ್ ರಾಜಣ್ಣ ಮೊದಲಾದವರು ಭಾಗವಹಿಸಿ ದ್ದರು.
(ಏಜೆನ್ಸೀಸ್)











Click it and Unblock the Notifications