ಸಂತ್ರಸ್ಥರಿಗೆ ನೆರವಿನ ಮಹಾಪೂರ
ಬೆಂಗಳೂರು, ಅ. 4 : ರಾಜ್ಯದಲ್ಲಿ ಮಳೆಯಿಂದ ಭಾರಿ ಹಾನಿ ಸಂಭವಿಸಿದ್ದು, ಕೇಂದ್ರ ಸರಕಾರ ಕೂಡಲೇ ರಾಷ್ಟ್ರೀಯ ವಿಪತ್ತು ಪ್ರದೇಶ ಎಂದು ಘೋಷಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಆಗ್ರಹಿಸಿದರು.
ಶನಿವಾರ ಪ್ರವಾಹಪೀಡಿತ ಪ್ರದೇಶಗಳು ವೈಮಾನಿಕ ಸಮೀಕ್ಷೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿ, ಉತ್ತರ ಕರ್ನಾಟಕದಲ್ಲಿ ಮಳೆಯಿಂದ ಭಾರಿ ಹಾನಿ ಸಂಭವಿಸಿದ್ದು, ಜೀವಹಾನಿ ಆಸ್ತಿಪಾಸ್ತಿ ನಷ್ಟವಾಗಿದೆ. ಒಂದ ಲಕ್ಷಕ್ಕೂ ಮನೆಗಳು, ಕೋಟ್ಯಂತರ ರುಪಾಯಿ ಮೌಲ್ಯದ ಬೆಳೆ ಸೇತುವೆಗಳು, ರಸ್ತೆಗಳು ಸಂಪೂರ್ಣ ಹಾನಿಯಾಗಿವೆ. ಈ ಹಿನ್ನೆಲೆಯಲ್ಲಿ 10,000 ಕೋಟಿ ರುಪಾಯಿ ನೆರವು ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿದರು.
ದೇವದುರ್ಗ ತಾಲ್ಲೂಕಿನ ಗೂಗಲ್ ಗ್ರಾಮದಲ್ಲಿ ನೀರಿನಲ್ಲಿ ಸಿಕ್ಕಿ ಹಾಕಿಕೊಂಡ ವೀರೇಶ, ಬಸವರಾಜು, ಚಂದ್ರಶೇಖರ ಎಂಬುವವರನ್ನು ರಕ್ಷಿಸಲಾಗಿದೆ. ಒಂಬತ್ತು ಹಳ್ಳಿಗಳ ಜನರಿಗೆ ಹೆಲಿಕಾಪ್ಟರ್ ಮೂಲಕ ಆಹಾರ ವಿತರಿಸಲಾಗಿದೆ. ವಾಯುಪಡೆಯ ಅಧಿಕಾರಿಗಳು ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದಾರೆ. ಮಳೆಬಾಧಿತ ಪ್ರದೇಶಗಳ ವೀಕ್ಷಣೆ ನಡೆಸಲಾಗುತ್ತಿದ್ದು, ಸ್ಪಷ್ಟ ಚಿತ್ರಣ ತಿಳಿಯುತ್ತಿಲ್ಲ. ಮಳೆಯಿಂದ ಹಾನಿಗೊಂಡಿರುವ ಮಂತ್ರಾಲಯ ಮಠಕ್ಕೆ ಮೊದ ಕಂತಾಗಿ 10 ಕೋಟಿ ರುಪಾಯಿ ಬಿಡುಗಡೆ ಮಾಡುವುದಾಗಿ ತಿಳಿಸಿದರು.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications