ಬಳ್ಳಾರಿಗೆ ಸೋನಿಯಾ, ಚಿದಂಬರಂ ಭೇಟಿ
ಬೆಂಗಳೂರು,
ಅ. 5 : ಯುಪಿಎ ಸರಕಾರದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಗೃಹ ಸಚಿವ ಪಿ ಚಿದಂಬರಂ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲು ಇಂದು ಬಳ್ಳಾರಿ ಆಗಮಿಸಲಿದ್ದಾರೆ. ಹೈದರಾಬಾದ್ ನಿಂದ ಸೇನಾ ಹೆಲಿಕಾಪ್ಟರ್ ಮೂಲಕ ತೋರಣಗಲ್ ಜಿಂದಾಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಪ್ರವಾಹ ಪೀಡಿತ ಪ್ರದೇಶಗಳ ಸಮೀಕ್ಷೆ ನಡೆಸಲಿದ್ದಾರೆ. ಅಕ್ಟೋಬರ್ 6 ರಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ರಾಯಚೂರು, ಬಳ್ಳಾರಿ ಪ್ರದೇಶಗಳಿಗೆ ಭೇಟಿ ನೀಡಲಿದ್ದಾರೆ. id="toptextpromo">ಕೇಂದ್ರ
ಸಚಿವರಾದ ವೀರಪ್ಪ ಮೊಯ್ಲಿ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಜತೆ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಸೋನಿಯಾ ಗಾಂಧಿ ಆಗಮನದ ಹಿನ್ನೆಲೆಯಲ್ಲಿ ಜಿಂದಾಲ್ ವಿಮಾನ ನಿಲ್ದಾಣದ ಸುತ್ತಮುತ್ತ ಭಾರಿ ಬಿಗಿಬಂದೋಬಸ್ತ್ ನಿಯೋಜಿಸಲಾಗಿದೆ ಎಂದು ಬಳ್ಳಾರಿ ಎಸ್ಪಿ ಸೀಮಂತಕುಮಾರ್ ಸಿಂಗ್ ತಿಳಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications