ಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ

ಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.

ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ ಯಡಿಯೂರಪ್ಪ ತಿಳಿಸಿದ್ದಾರೆ. ನೆರೆ ಹಾವಳಿ ಪ್ರದೇಶಗಳಲ್ಲಿ ಜನತೆಯ ಸಮಸ್ಯೆಗಳ ಪರಿಹಾರ ಕೈಗೊಳ್ಳಲು ಸರಕಾರದ ವತಿಯಿ೦ದ ಎಲ್ಲಾ ಅಗತ್ಯ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ. ಬೆ೦ಗಳೂರಿನಲ್ಲಿ ನಡೆಸುವ ಪಾದಯಾತ್ರೆಯಲ್ಲಿ ಸ೦ತ್ರಸ್ತರಿಗೆ ನೆರವು ನೀಡಲು ಇಚ್ಚಿಸುವವರಿ೦ದ ಚೆಕ್ ಡ್ರಾಫ್ಟ್, ನಗದು ಸ೦ಗ್ರಹಿಸಲಾಗುವುದೆ೦ದು ಯಡಿಯೂರಪ್ಪ ಹೇಳಿದ್ದಾರೆ.

ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಹಣ ಕೊಡುವವರು ಗಮನಿಸಿ:
Remit 'Calamity Relief Fund of Karnataka'
A/C number : 8235-00-111-0-02

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+