ಪ್ರವಾಹ : ಅ.10 ರಂದು ಸರ್ವಪಕ್ಷಗಳ ಸಭೆ
ಬೆಂಗಳೂರು, ಅ.8 : ಉತ್ತರ ಕರ್ನಾಟಕದಲ್ಲಿ ನೆರೆಗೆ ತುತ್ತಾಗಿರುವ ಸಂತ್ರಸ್ಥರ ನೆರವಿಗೆ ಹೆಚ್ಚಿನ ಅನುದಾನ ನೀಡುವಂತೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರೊಂದಿಗೆ ನೇರ ಮಾತುಕತೆ ನಡೆಸುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಎರಡನೇ ದಿನ ಪಾದಯಾತ್ರೆಯಲ್ಲಿ 100 ಕೋಟಿ ಹೆಚ್ಚು ನಿಧಿ ಸಂಗ್ರಹವಾಗಿದೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿನ ಸ್ಪಷ್ಟ ಚಿತ್ರಣವನ್ನು ತೆರೆದಿಟ್ಟರೆ ನಮ್ಮ ಮನವಿಗೆ ಸ್ಪಂದಿಸುತ್ತಾರೆ ಎಂಬ ವಿಶ್ವಾಸವಿದೆ ಎಂದರು. ಆಂಧ್ರಪ್ರದೇಶ ಮತ್ತು ಕರ್ನಾಟಕದಲ್ಲಿ ನೆರೆ ಹಾವಳಿಗೆ ತುತ್ತಾಗಿರುವ ಪ್ರದೇಶ ವೀಕ್ಷಣೆಗೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅಕ್ಟೋಬರ್ 10 ರಂದು ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಅವರನ್ನು ಭೇಟಿ ಮಾಡಿ ನೇರ ಮಾತುಕತೆ ನಡೆಸುವೆ ಎಂದು ಯಡಿಯೂರಪ್ಪ ವಿವರಿಸಿದರು.
ಪ್ರಧಾನಿ ಭೇಟಿಯಾಗಲು ಹೈದರಾಬಾದ್ ಗೆ ತೆರಳುವುದಾಗಿ ಹೇಳಿದ ಯಡಿಯೂರಪ್ಪ, ರಾಜ್ಯದಲ್ಲಿ ಆಗಿರುವ ನಷ್ಟದ ಪರಿಹಾರ ಕೈಗೊಳ್ಳಲು ಅಗತ್ಯ ಇರುವ ಹಣ ಹಾಗೂ ಕೈಗೊಳ್ಳುವ ಕ್ರಮಗಳ ಕುರಿತು ವಿಸ್ತೃತವಾಗಿ ಚರ್ಚೆ ನಡೆಸಲಾಗುವುದು ಎಂದರು.
ಅಕ್ಟೋಬರ್ 10 ರಂದು ಸರ್ವಪಕ್ಷಗಳ ಸಭೆ
ರಾಜ್ಯದಲ್ಲಿ ಮಳೆ ಮತ್ತು ಪ್ರವಾಹದಿಂದ ಉಂಟಾಗಿರುವ ಹಾನಿ ಕುರಿತು ಅಕ್ಟೋಬರ್ 10 ರಂದು ಸರ್ವಪಕ್ಷಗಳ ಸಭೆ ಕರೆಯಲಾಗಿದೆ. ಈ ಸಭೆಗೆ ರಾಜ್ಯದ ಕೇಂದ್ರ ಸಚಿವರನ್ನು ಆಹ್ವಾನಿಸಲಾಗಿದೆ. ಸಭೆ ನಂತರ ಎರಡು ಮೂರು ದಿನಗಳಲ್ಲಿ ಸರ್ವಪಕ್ಷಗಳ ನಿಯೋಗ ಕರೆದೊಯ್ದು ಹೆಚ್ಚಿನ ಅನುದಾನ ಒದಗಿಸುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಯಡಿಯೂರಪ್ಪ ಹೇಳಿದರು.
ನೆರೆ ಹಾನಿ ಅಧ್ಯಯನಕ್ಕೆ ಕೇಂದ್ರದಿಂದ ತಂಡ ಆಗಮಿಸಿ ಅಧ್ಯಯನ ನಡೆಸಿ ಅದು ವರದಿ ನೀಡಿ ನಂತರ ಅನುದಾನ ಬಿಡುಗಡೆ ಮಾಡುವುದಕ್ಕೆ ಕನಿಷ್ಠ ಪಕ್ಷ ಒಂದು ತಿಂಗಳಾದರೂ ಬೇಕಾಗುತ್ತದೆ. ಅಲ್ಲಿಯವರೆಗೆ ಪರಿಹಾರ ಕೈಗೊಳ್ಳದೇ ನೆರವಿಗಾಗಿ ಕಾಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ತಕ್ಷಣವೇ ಹೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದರು. ಕೇಂದ್ರದಿಂದ ಮೊದಲ ಹಂತದಲ್ಲಿ 156.84 ಕೋಟಿ ಬಂದಿದ್ದರೆ, ಎರಡನೇ ಹಂತದಲ್ಲಿ 52.26 ಕೋಟಿ ರುಪಾಯಿಗಳ ಪರಿಹಾರ ಹಣ ಬಂದಿದೆ.
(ದಟ್ಸ್ ಕನ್ನಡ ವಾರ್ತೆ)
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications