ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಯಚೂರಿನಲ್ಲಿ ಪ್ರಧಾನಿ ವೈಮಾನಿಕ ಸಮೀಕ್ಷೆ

|
Google Oneindia Kannada News

Manmohan Singh to visit flood-hit Raichur today
ಬೆಂಗಳೂರು, ಅ.10: ರಾಜ್ಯದ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರಧಾನಿ ಮನಮೋಹನ್ ಸಿಂಗ್ ಶನಿವಾರ ವೈಮಾನಿಕ ಸಮೀಕ್ಷೆ ನಡೆಸಿದರು. ನಂತರ ಅವರು ರಾಯಚೂರಿ ಯರಮರಸ್ ಹೆಲಿಪ್ಯಾಡ್ ಗೆ ಬಂದಿಳಿದರು. ರಾಯಚೂರು ಜಿಲ್ಲಾ ಕೇಂದ್ರದಲ್ಲಿ ಪ್ರಧಾನಿ ನೇತೃತ್ವದಲ್ಲಿ ಪರಿಶೀಲನಾ ಸಭೆ ಆರಂಭವಾಗಿದೆ.

ದೆಹಲಿಯಿಂದ ಬೆಳಗ್ಗೆ 9ಕ್ಕೆ ಹೈದರಾಬಾದ್ ಗೆ ಆಗಮಿಸಿದ ಅವರು ಹೆಲಿಕಾಪ್ಟರ್ ನಲ್ಲಿ ಸಮೀಕ್ಷೆ ನಡೆಸಿ ಇದೀಗ ರಾಜ್ಯದಕ್ಕೆ ಆಗಮಿಸಿದ್ದಾರೆ. ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಗೃಹ ಸಚಿವ ವಿ.ಎಸ್.ಆಚಾರ್ಯ, ಸಚಿವರಾದ ಶೋಭಾ ಕರಂದ್ಲಾಜೆ, ಕರುಣಾಕರ ರೆಡ್ಡಿ ಮತ್ತು ಮುಖ್ಯ ಕಾರ್ಯದರ್ಶಿ ಎಸ್ ವಿ ರಂಗನಾಥ್ ಉಪಸ್ಥಿತರಿದ್ದಾರೆ.

ಪ್ರಧಾನಿ ಅವರೊಂದಿಗೆ ಕೇಂದ್ರ ಸಚಿವರಾದ ಎಂ ವೀರಪ್ಪ ಮೊಯಿಲಿ, ಮಲ್ಲಿಕಾರ್ಜುನ ಖರ್ಗೆ ಮತ್ತು ಎಸ್.ಎಂ.ಕೃಷ್ಣ ಅವರು ಸಭೆಯಲ್ಲಿ ಉಪಸ್ಥಿತರಾಗಿದ್ದಾರೆ. ತುರ್ತು ಪರಿಹಾರ ಕಾರ್ಯಗಳಿಗೆ ರು.10 ಸಾವಿರ ಕೋಟಿ ಬಿಡುಗಡೆ ಮಾಡಬೇಕೆಂದು ಸರಕಾರ ಈಗಾಗಲೇ ಕೇಂದ್ರಕ್ಕೆ ಮನವಿ ಮಾಡಿದೆ.

ಯುಪಿಎ ಅಧ್ಯಕ್ಷೆ ಸೋನಿಮಾಗಾಂಧಿ ಜತೆ ವೈಮಾನಿಕ ಸಮೀಕ್ಷೆ ನಡೆಸಿದ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಅವರಿಗೆ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯಕ್ಕೆ ಹೆಚ್ಚಿನ ನೆರವು ನೀಡಬೇಕೆಂದು ಮನವಿ ಮಾಡಿದ್ದಾರೆ. ಆದರೆ ಇನ್ನೂ ನಿರೀಕ್ಷಿತ ಪ್ರಮಾಣದಲ್ಲಿ ನೆರವು ಬಂದಿಲ್ಲ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X