ಪರಿಹಾರ ಸದ್ಭಳಿಕೆಯಾಗಲಿ, ಕೃಷ್ಣ
ಬೆಂಗಳೂರು,
ಅ. 11 : ಪ್ರವಾಹ ಪರಿಹಾರ ಕಾರ್ಯಕ್ಕೆ ಕೇಂದ್ರ ಸರಕಾರ ರಾಜ್ಯಕ್ಕೆ 1,000 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿರುವುದಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್ಎಂ ಕೃಷ್ಣ ಅಭಿನಂದಿಸಿದ್ದಾರೆ. ಜೊತೆಗೆ ರಾಜ್ಯಕ್ಕೆ ನೀಡಿರುವ ಹಣವನ್ನು ನೈಜ ಸಂತ್ರಸ್ಥರಿಗೆ ತಲುಪಿಸುವ ಜವಾಬ್ದಾರಿ ರಾಜ್ಯ ಸರಕಾರದ ಮೇಲಿದೆ ಎಂದು ಅವರು ಹೇಳಿದ್ದಾರೆ. id="toptextpromo">ಬೆಂಗಳೂರಿನಲ್ಲಿ
ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಂತ್ರಸ್ಥರ ಬದುಕಿಗೆ ನೆಲೆ ಕಲ್ಪಿಸುವ ಗುರುತರ ಹೊಣೆ ರಾಜ್ಯ ಸರಕಾರದ್ದು, ಅತ್ಯಂತ ಪಾರದರ್ಶಕವಾಗಿ ನಡೆಯಬೇಕು. ಗುಣಮಟ್ಟಕ್ಕೆ ಅದ್ಯತೆ ನೀಡಬೇಕು ಎಂದರು. ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಿದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ 1,000 ಕೋಟಿ ರುಪಾಯಿ ಪರಿಹಾರ ಘೋಷಣೆ ಮಾಡಿದ್ದಾರೆ. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications