ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸೋಮವಾರ ಆಟೋ ಚಾಲಕರ ಮುಷ್ಕರ

|
Google Oneindia Kannada News

Auto Rickshaw Strike in Bengaluru
ಬೆಂಗಳೂರು, ಅ.12: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹಲವು ಆಟೋ ಚಾಲಕರ ಸಂಘಟನೆಗಳು ಸೋಮವಾರ(ಅ.12) ಬೆಂಗಳೂರಿನಲ್ಲಿ ಮುಷ್ಕರಕ್ಕೆ ಕರೆ ನೀಡಿವೆ. ಬೆಳಗ್ಗೆ 6ಗಂಟೆಯಿಂದ ಸಂಜೆ 6ಗಂಟೆಯವರೆಗೂ ಆಟೋ ಚಾಲಕರು ಸಂಚಾರ ಸ್ಥಗಿತಗೊಳಿಸಿ ಮುಷ್ಕರದಲ್ಲಿ ಪಾಲ್ಗೊಳ್ಳಲಿದ್ದಾರೆ.

ಆಟೋಗಳಿಗೆ ಹಸಿರು ಬಣ್ಣಕ್ಕೆ ಬದಲಾಯಿಸಬೇಕೆಂಬ ನಿರ್ಧಾರಕ್ಕೆ ವಿರೋಧ. ಹೊಸ ಆಟೋಗಳಿಗೆ ಪರವಾನಗಿ ನೀಡುವುದನ್ನು ಸಾರಿಗೆ ಇಲಾಖೆ ನಿಲ್ಲಿಸಬೇಕು. ಡಿಜಿಟಲ್ ಮೀಟರ್ ಹಾಗೂ ಸ್ಮಾರ್ಟ್ ಕಾರ್ಡ್ ಕಡ್ಡಾಯ ಮಾಡಿರುವುದನ್ನು ಕೈಬಿಡಬೇಕು. ಸಿಂಪ್ಯೂಟರ್ ಕೇಸ್ ಗಳನ್ನು ಕಡ್ಡಾಯವಾಗಿ ವಜಾ ಮಾಡಬೇಕು ಎಂದು ಆಗ್ರಹಿಸಿ ಆಟೋ ಚಾಲಕರು ಮುಷ್ಕರಕ್ಕೆ ಇಳಿದಿದ್ದಾರೆ.

ಆಟೋ ರಿಕ್ಷಾ ಚಾಲಕರ ಸಂಘ, ಆದರ್ಶ ಆಟೋ ಮತ್ತು ಟ್ಯಾಕ್ಸಿ ಚಾಲಕರ ಸಂಘ, ಜಯಕರ್ನಾಟಕ ಆಟೋ ಘಟಕ ಸೇರಿದಂತೆ ಹಲವಾರು ಆಟೋ ಸಂಘಟನೆಗಳು ಮುಷ್ಕರದಲ್ಲಿ ಪಾಲ್ಗೊಂಡಿವೆ. ಸುಮಾರು 1 ಲಕ್ಷ ಆಟೋ ಚಾಲಕರು ಮುಷ್ಕರದಲ್ಲಿ ನಿರತರಾಗಿದ್ದಾರೆ.

ಸರಿ ಸುಮಾರು 80 ಸಾವಿರಕ್ಕೂ ಹೆಚ್ಚು ಆಟೋಗಳು ಇಂದು ರಸ್ತೆಗಿಳಿಯುವುದಿಲ್ಲ. ಆಟೋ ಪ್ರಯಾಣಿಕರು ಪರದಾಟ ತಪ್ಪಿದ್ದಲ್ಲ. ಬೆಂಗಳೂರಿನ ಕೆಂಪೇಗೌಡ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಬಹುತೇಕ ಕಡೆ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗಲಿದೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X