ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯೋತ್ಸವ ಪ್ರಶಸ್ತಿ ವಿತರಣೆ ಇಲ್ಲ : ಸಿಎಂ

|
Google Oneindia Kannada News

yeddyurappa
ಬೆಂಗಳೂರು, ಅ. 12 : ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪಡೆಯುವ ನಿರೀಕ್ಷೆಯಲ್ಲಿದ್ದ ಮಂದಿಗೆ ಸರಕಾರ ಕಹಿ ಸುದ್ದಿಯೊಂದು ಹೊರಡಿಸಿದೆ. ಉತ್ತರ ಕರ್ನಾಟಕದ ನೆರೆ ಪ್ರವಾಹದಿಂದಾಗಿ ರಾಜ್ಯ ಸರಕಾರ ಈ ಬಾರಿ 2008-09 ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ನೀಡದಿರಲು ನಿರ್ಧರಿಸಿದೆ.

ನಯನ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಈ ವಿಷಯವನ್ನು ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೆರೆ ಹಾವಳಿಯಿಂದ ಉತ್ತರ ಕರ್ನಾಟಕದ ಜನತೆ ಸಂಕಷ್ಟದಲ್ಲಿದ್ದಾರೆ. ಈ ಸಂದರ್ಭದಲ್ಲಿ ರಾಜ್ಯ ಸರಕಾರ ಈ ಸಲದ ರಾಜ್ಯೋತ್ಸವ ಪ್ರಶಸ್ತಿ ನೀಡದಿರಲು ತೀರ್ಮಾನಿಸಿದೆ. ಇದರ ಜೊತೆಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಸರಳವಾಗಿ ಆಚರಿಸಿ ಎಂದು ಅವರು ಮನವಿ ಮಾಡಿಕೊಂಡರು.

ಉತ್ತರ ಕರ್ನಾಟಕದ 14 ಜಿಲ್ಲೆಗಳು ಪ್ರವಾಹದಿಂದಾಗಿ ಜನರು ನಿರ್ಗತಿಕರಾಗಿದ್ದಾರೆ. ಆ ಭಾಗದ ಜನರು ಸಂಕಷ್ಟದಲ್ಲಿರುವಾಗ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಬಾರದೆಂಬ ಹಿರಿಯ ಮನವಿ ಮೇರೆಗೆ ಈ ಸಾಲಿನ ಪ್ರಶಸ್ತಿಯನ್ನು ಮುಂದಿನ ವರ್ಷ ನೀಡಲು ತೀರ್ಮಾನಿಸಲಾಗಿದೆ ಎಂದು ಅವರು ವಿವರಿಸಿದರು.

ಕಾನೂನು ಕ್ರಮ

ಪ್ರವಾಹ ಪೀಡಿತ ನೆರೆ ಸಂತ್ರಸ್ಥರಿಗೆ ಜಿಲ್ಲಾಧಿಕಾರಿಗಳ ಅನುಮತಿ ಪಡೆಯದೆ ಸಾರ್ವಜನಿಕರಾಗಲಿ, ಸಂಘ ಸಂಸ್ಥೆಗಳಾಗಲಿ ಅನಗತ್ಯವಾಗಿ ಸಾರ್ವಜನಿಕರಿಂದ ನಿಧಿ ಸಂಗ್ರಹಿಸಿ ದುರುಪಯೋಗಪಡಿಸಿಕೊಂಡಲ್ಲಿ ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಯಡಿಯೂರಪ್ಪ ಎಚ್ಚರಿಕೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಂತ್ರಸ್ಥರ ಹಣ ದುರುಪಯೋಗ ಆಗದಂತೆ ಸರಕಾರ ಕ್ರಮ ಕೈಗೊಳ್ಳಲಿದೆ. ಪ್ರತಿ ಪೈಸೆಯೂ ಸಂತ್ರಸ್ಥರಿಗೆ ಸದ್ವಿನಿಯೋಗವಾಗಲಿದೆ ಎಂದು ಅವರು ಭರವಸೆ ನೀಡಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X