ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಂಸದರ ನಿಧಿಯಿಂದ ನೆರೆ ಸಂತ್ರಸ್ತರಿಗೆ 25 ಲಕ್ಷ ರು.

|
Google Oneindia Kannada News

ಶಿವಮೊಗ್ಗ, ಅ. 13 : ರಾಜ್ಯದ ಸಂಸದರು ತಮ್ಮ ಸಂಸದರ ನಿಧಿಯಿಂದ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ 25 ಲಕ್ಷ ರೂ.ಗಳನ್ನು ನೀಡಲು ತೀರ್ಮಾನಿಸಿದ್ದು, ಇದಕ್ಕಾಗಿ ಸಭಾಪತಿ ಮೀರಾ ಕುಮಾರಿ ಜೊತೆ ಚರ್ಚಿಸಿ, ವಿಶೇಷ ಅನುಮತಿ ಪಡೆದು ಹಣವನ್ನು ನೀಡುವುದಾಗಿ ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.

ಮಂಗಳವಾರ ಬೆಳಿಗ್ಗೆ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಸದರ ನಿಧಿಯಿಂದ ಜಿಲ್ಲೆಯ ಅಭಿವೃದ್ಧಿಗಾಗಿ ಬಳಸಬೇಕೆಂಬ ಕಾನೂನಿದೆ. ಹೀಗಾಗಿ, ಜಿಲ್ಲೆಯ ಅಭಿವೃದ್ಧಿಗಾಗಿ ಬಳಸಬೇಕಾದ ಹಣದಲ್ಲಿ 25 ಲಕ್ಷ ರೂ.ಗಳನ್ನು ನೆರೆ ಪರಿಹಾರಕ್ಕೆ ಕೊಡಲು ಕಾಯ್ದೆಯಲ್ಲಿ ತೊಡಕಿದೆ. ರಾಜ್ಯದ ಸಂಸದರೆಲ್ಲರೂ ಸಭಾಪತಿ ಜೊತೆ ಚರ್ಚೆ ನಡೆಸಿ ನಂತರ ಹಣವನ್ನು ಪರಿಹಾರ ಕಾರ್ಯಕ್ಕೆ ನೀಡುವುದಾಗಿ ಭರವಸೆ ಕೊಟ್ಟರು.

ನಿನ್ನೆ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಪ್ರವಾಸ ಮಾಡಿ ನೆರೆ ಸಂತ್ರಸ್ತರ ಪರಿಹಾರಕ್ಕಾಗಿ 60 ಸಾವಿರ ರೂ.ಗಳನ್ನು ಸಂಗ್ರಹಿಸಲಾಗಿದೆ. ಇಂದು ಕೂಡ ಪ್ರವಾಸ ಕಾರ್ಯ ಮುಂದುವರೆಸುವುದಾಗಿ ಇದೇ ಸಂದರ್ಭದಲ್ಲಿ ತಿಳಿಸಿದರು. ಹಾಗೆಯೇ, ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲು ಓಡಾಟಕ್ಕೆ ಒಂದೊಂದೇ ಸಮಸ್ಯೆ ಎದುರಾಗುತ್ತಿದೆ. ಸದ್ಯಕ್ಕೆ ಇಂಟರ್‌ಸಿಟಿ ರೈಲಿನ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡುವುದಿಲ್ಲ. ಶಿವಮೊಗ್ಗ-ತಾಳಗೊಪ್ಪ ರೈಲ್ವೇ ಮಾರ್ಗಕ್ಕೆ ಅರಣ್ಯ ಪ್ರದೇಶವಿದ್ದು, ಈ ಒಂದು ಸಮಸ್ಯೆಯನ್ನು ಬಿಟ್ಟರೆ ಬೇರೆ ಯಾವ ರೀತಿಯ ಸಮಸ್ಯೆಯೂ ಇಲ್ಲ ಎಂದರು.

ದ್ವಿತೀಯ ಶರಣ ಸಾಹಿತ್ಯ ಸಮ್ಮೇಳನ

ಜಿಲ್ಲಾ ಶರಣಸಾಹಿತ್ಯ ಪರಿಷತ್ತಿನ ವತಿಯಿಂದ ಅಕ್ಟೋಬರ್ 30 ಹಾಗೂ 31ರಂದು ನಗರದ ಕುವೆಂಪು ರಂಗಮಂದಿರದಲ್ಲಿ ಶಿವಮೊಗ್ಗ ಜಿಲ್ಲಾ ದ್ವಿತೀಯ ಶರಣ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಉದ್ದೇಶಿಸಲಾಗಿದೆ. ಸಮ್ಮೇಳನದ ಅಧ್ಯಕ್ಷರನ್ನಾಗಿ ಸಾಹಿತಿ ಡಾ|.ಎ.ಎಸ್.ವೇಣುಗೋಪಾಲ್‌ರವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿರುವುದಾಗಿ ಸಂಸದ ಹಾಗೂ ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಬಿ.ವೈ.ರಾಘವೇಂದ್ರ ಹೇಳಿದರು.

ಸಮ್ಮೇಳನವು ಅ.30ರಂದು ಬೆಳಿಗ್ಗೆ 7 ಗಂಟೆಗೆ ಧ್ವಜಾರೋಹಣದೊಂದಿಗೆ ಆರಂಭಗೊಂಡು, ವಚನ ಸಾಹಿತ್ಯ ಗ್ರಂಥಗಳ ಮೆರವಣಿಗೆ ಬೆಳಿಗ್ಗೆ 9 ಗಂಟೆಗೆ ವೀರಶೈವ ಕಲ್ಯಾಣ ಮಂಟಪದಿಂದ ಕುವೆಂಪು ರಂಗಮಂದಿರದಲ್ಲಿ ಸೇರುವುದು. ಅಂದು ಬೆಳಿಗ್ಗೆ 10.30ಕ್ಕೆ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದ್ದು, ಸಮಾರಂಭದಲ್ಲಿ ಮೈಸೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮಿ ಮತ್ತು ಸಿರಿಗೆರೆ ಡಾ|.ಶಿವಮೂರ್ತಿ ಶಿವಾಚಾರ್ಯ ಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗೋರೂರು ಚನ್ನಬಸಪ್ಪ ವಹಿಸುವರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿರುವರು. ಇಂಧನ ಸಚಿವ ಕೆ.ಎಸ್.ಈಶ್ವರಪ್ಪ, ಡಿ.ಹೆಚ್.ಶಂಕರಮೂರ್ತಿ, ಹೆಚ್.ಸಿ.ಬಸವರಾಜಪ್ಪ, ಬಿ.ಕೆ.ಸಂಗಮೇಶ್, ಪಂಕಜ್‌ಕುಮಾರ್ ಪಾಂಡೆ, ಎ.ಬಿ.ಹೇಮಚಂದ್ರ, ಎಸ್.ಮುರುಗನ್ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು.

ಸಮಾರೋಪ ಸಮಾರಂಭವನ್ನು ಅ.31ರಂದು ಮಧ್ಯಾಹ್ನ 3.30ಕ್ಕೆ ಬೆಕ್ಕಿನ ಕಲ್ಮಠ ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದು, ಸಂಸದ ಬಿ.ವೈ.ರಾಘವೇಂದ್ರ ಅಧ್ಯಕ್ಷತೆ ವಹಿಸುವರು. ಸಮ್ಮೇಳನದಲ್ಲಿ ಚಿಂತನ ಗೋಷ್ಠಿಗಳು, ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಿರುವುದಾಗಿ ಹೇಳಿದರು. ಗೋಷ್ಠಿಯಲ್ಲಿ ನಗರಸಭಾಧ್ಯಕ್ಷ ಎನ್.ಜೆ.ರಾಜಶೇಖರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕತ್ತಿಗೆ ಚನ್ನಬಸಪ್ಪ, ಸ್ವಾಗತ ಸಮಿತಿಯ ಕಾರ್ಯದರ್ಶಿ ಹೆಚ್.ಎನ್.ಮಲ್ಲಪ್ಪ, ಜ್ಯೋತಿಪ್ರಕಾಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X