ಅರುಣಾಚಲಕ್ಕೆ ಪಿಎಂ ಭೇಟಿ : ಚೀನಾ ಕ್ಯಾತೆ

Manmohan singh
ಬೀಜಿಂಗ್, ಅ. 13 : ವಿವಾದಿತ ಪ್ರದೇಶವಾಗಿರುವ ಅರುಣಾಚಲ ಪ್ರದೇಶಕ್ಕೆ ಭಾರತದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಭೇಟಿ ನೀಡಿರುವುದಕ್ಕೆ ಚೀನಾ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ವಿವಾದಿತ ಪ್ರದೇಶ ಎಂದು ಗೊತ್ತಿದ್ದರೂ ಅಲ್ಲಿಗೆ ಭೇಟಿ ನೀಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಚೀನಾದ ವಿದೇಶಾಂಗ ವ್ಯವಹಾರಗಳ ಖಾತೆ ವಕ್ತಾರ ಮಾ ಜಾಕ್ಸೋ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇತ್ತ ಭಾರತದ ವಿದೇಶಾಂಗ ಖಾತೆ ಸಚಿವ ಎಸ್ ಎಂ ಕೃಷ್ಣ ಅವರು ಅರುಣಾಚಲ ಪ್ರದೇಶ ಭಾರತದ ಅವಿಭಾಜ್ಯ ಅಂಗ. ನಮ್ಮ ನೆಲಕ್ಕೆ ನಾವು ಭೇಟಿ ನೀಡುವುದರಲ್ಲಿ ತಪ್ಪೇನಿದೆ ಎಂದು ವಾಹಿನಿಯೊಂದರ ಸಂದರ್ಶನದಲ್ಲಿ ಸ್ಪಷ್ಟಪಡಿಸಿದ್ದಾರೆ.

ಅರುಣಾಚಲ ಪ್ರದೇಶದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಬೇಕಿದ್ದರಿಂದ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಪ್ರಚಾರ ಕಾರ್ಯಕ್ಕಾಗಿ ಇತ್ತೀಚೆಗೆ ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದರು. ಭಾರತದ ಪ್ರಧಾನಮಂತ್ರಿ ಅವರು ಅರುಣಾಚಲ ಪ್ರದೇಶಕ್ಕೆ ಭೇಟಿ ನೀಡಿರುವುದು ಶುದ್ಧ ತಪ್ಪು. ಇದರಿಂದ ಗಡಿ ಭಾಗದಲ್ಲಿ ಗೊಂದಲ ಸೃಷ್ಟಿಯಾಗಲಿದೆ. ಈ ಮೂಲಕ ಭಾರತ ಮತ್ತು ಚೀನಾ ಬಾಂಧವ್ಯಕ್ಕೆ ಧಕ್ಕೆಯಾಗುವ ಸಾಧ್ಯತೆಗಳಿವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆಯೂ ಚೀನಾ ಗಡಿ ವಿಚಾರಕ್ಕೆ ಖ್ಯಾತೆ ತೆಗೆದಿದ್ದರು. ಅಂದಿನ ವಿದೇಶಾಂಗ ಮಂತ್ರಿಯಾಗಿದ್ದ ಪ್ರಣಬ್ ಮುಖರ್ಜಿ ಅವರು ಅರುಣಾಚಲ ಪ್ರದೇಶ ಭಾರತದ ಅಂಗ. ನಮ್ಮ ದೇಶದಲ್ಲಿ ಭಾರತದ ಪ್ರಧಾನಿಗಳು ಎಲ್ಲಿಯಾದರೂ, ಯಾವ ಕ್ಷಣದಲ್ಲಾದರೂ ಭೇಟಿ ನೀಡುವ ಸಂಪೂರ್ಣ ಅಧಿಕಾರವಿದೆ ಎಂದು ಚೀನಾಕ್ಕೆ ತಿರುಗೇಟು ನೀಡಿದ್ದರು.

(ಏಜನ್ಸೀಸ್)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+