ರಾಮಮಂದಿರ ಕಟ್ಟಲು ಕಾಂಗ್ರೆಸ್ ಒಲವು : ಸಿಂಘಾಲ್

ರಾಜಗೀರ್ ನಲ್ಲಿ ಆಯೋಜಿಸಲಾಗಿದ್ದ ಆರ್ಎಸ್ಎಸ್ ಸಭೆಯಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶೇ. 90 ರಷ್ಟು ಕಾಂಗ್ರೆಸ್ ನಾಯಕರು ರಾಮಮಂದಿರ ಕಟ್ಟುವ ಪರವಾಗಿ ಇದ್ದಾರೆ. ಆದರೆ, ಆ ಪಕ್ಷದ ನಾಯಕಿ ಸೋನಿಯಾ ಗಾಂಧಿ ಅವರು ಮೂಲ ವಿದೇಶವಾಗಿದ್ದರಿಂದ ಕಾಂಗ್ರೆಸ್ ಪಕ್ಷದ ಬಾಯಿ ಮುಚ್ಚಿಕೊಂಡಿದೆ ಎಂದರು.
ಅಯೋಧ್ಯೆಯಲ್ಲಿ ಬಾಬ್ರಿ ಮಸೀದಿ ಧ್ವಂಸಗೊಂಡಾಗ ಕೇಂದ್ರದಲ್ಲಿ ಪಿ ವಿ ನರಸಿಂಹರಾವ್ ನೇತೃತ್ವದ ಕಾಂಗ್ರೆಸ್ ಸರಕಾರವಿತ್ತು ಎನ್ನುವ ಸಂಗತಿಯನ್ನು ಮುಚ್ಚಿಡಲು ಸಾಧ್ಯವಿಲ್ಲ. ರಾಷ್ಟ್ರೀಯ ಜನತಾದಳದ ಮುಖಂಡ ಲಾಲು ಪ್ರಸಾದ್ ಯಾದವ್ ಅವರು ಇಂದಿಗೂ ಕೂಡಾ ರಾಮಮಂದಿರ ನಿರ್ಮಾಣದ ಪರವಾಗಿದ್ದಾರೆ ಎಂದು ಸಿಂಘಾಲ್ ಹೇಳಿದರು.
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವುದು ಹಿಂದೂಗಳ ಕರ್ತವ್ಯ ಹಾಗೂ ಸವಾಲು. ಕೋಟ್ಯಂತರ ಹಿಂದೂಗಳ ಕನಸನ್ನು ನನಸು ಮಾಡಬೇಕಿದೆ. ಅದು ನಮ್ಮೆಲ್ಲರ ಮೇಲಿರುವ ಅತ್ಯಂತ ಗುರುತರವಾದ ಜವಾಬ್ದಾರಿ ಎಂದು ಸಿಂಘಾಲ್ ಅಭಿಪ್ರಾಯಪಟ್ಟರು. ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರು ಕಳೆದ ಲೋಕಸಭೆ ಚುನಾವಣೆಯಲ್ಲಿ ರಾಮಮಂದಿರ ನಿರ್ಮಾಣ ಮಾಡುವ ಅಂಶವನ್ನು ಇಟ್ಟುಕೊಂಡು ಅಖಾಡಕ್ಕೆ ಇಳಿದಿದ್ದರು. ಆದರೆ, ಮತದಾರರು ಬಿಜೆಪಿಯನ್ನು ತಿರಸ್ಕರಿಸಿದರು. ಚುನಾವಣೆಯಲ್ಲಿ ಸೋತ ಬಳಿಕವೂ ಅಡ್ವಾಣಿ ಎರಡು ಬಾರಿ ರಾಮಮಂದಿರ ನಿರ್ಮಾಣದ ಬಗ್ಗೆ ಮಾತನಾಡಿದ್ದಾರೆ.
(ಏಜನ್ಸೀಸ್)












Click it and Unblock the Notifications