76ನೇ ಕನ್ನಡ ಸಾಹಿತ್ಯ ಸಮ್ಮೇಳನ ರದ್ದು ?
ಬೆಂಗಳೂರು,
ಅ. 14 : ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಅತಿವೃಷ್ಟಿ ಹಿನ್ನೆಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ನಡೆಯಬೇಕಿದ್ದ 76ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮುಂದೂಡುವ ಸಾಧ್ಯತೆ ಇದೆ. id="toptextpromo">ಡಿಸೆಂಬರ್
18 ರಿಂದ 20ರವರೆಗೆ ನಡೆಸಲು ಈ ಹಿಂದೆ ನಿರ್ಧರಿಸಲಾಗಿತ್ತು. ಪ್ರವಾಹದಿಂದ ಗದಗ ಸೇರಿ ಉತ್ತರ ಕರ್ನಾಟಕದ ಜನ ಸಂಕಷ್ಟಕ್ಕೆ ಸಿಲುಕಿದ್ದರಿಂದ ಸಾಹಿತ್ಯ ಸಮ್ಮೇಳನ ಸಂಬಂಧಿಸಿದ ಚಟುವಟಿಕೆಗಳನ್ನು ಸ್ಥಗಿತಗೊಳಿಸುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ನಿರ್ದೇಶನ ನೀಡಿದ್ದಾರೆ. ಈ ಕುರಿತು ಮಾತನಾಡಿದ ಕಸಾಪ ಅಧ್ಯಕ್ಷ ನಲ್ಲೂರು ಪ್ರಸಾದ್, ಪ್ರವಾಹಕ್ಕೆ ಸಿಲುಕಿ ರಾಜ್ಯವೇ ಸಂಕಟದಿಂದ ನರಳುತ್ತಿರುವಾಗ ನಾವು ಸಂಭ್ರಮಪಡುವುದರಲ್ಲಿ ಅರ್ಥವಿಲ್ಲ. ಬದಲಾದ ಸನ್ನಿವೇಶದಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಯೋಚಿಸಬೇಕಿದೆ ಎಂದು ಅವರು ಹೇಳಿದರು. id='are-slot-1' class='oiad oi-axt oiadv'> id='top-searched-articles'>(ದಟ್ಸ್
ಕನ್ನಡ ವಾರ್ತೆ)











Click it and Unblock the Notifications