ಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಒಬಾಮಾ
ವಾಷಿಂಗ್
ಟನ್, ಅ. 15 : ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ವೇತಭವನದಲ್ಲಿ ದೀಪ ಬೆಳಗಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಬುಧವಾರ ಸಂಭ್ರಮದಿಂದ ಆಚರಿಸಿದರು. id="toptextpromo">ಹನುಮಂತನ
ಭಕ್ತನಾಗಿರುವ ಒಬಾಮಾ ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ. ಅವರ ಕಚೇರಿಯಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಭಾವಚಿತ್ರ ಇರುವುದು ಅವರಲ್ಲಿರುವ ಭಾರತೀಯರ ಮೇಲಿರುವ ಗೌರವ ಸೂಚಿಸುತ್ತಿದೆ. ಬುಧವಾರ ಶ್ವೇತಭವನದಲ್ಲಿ ಏರ್ಪಡಿಸಲಾಗಿದ್ದ ದೀಪಾವಳಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು ದೀಪ ಬೆಳಗಿಸಿ ಭಾರತೀಯರಿಗೆ ದೀಪಾವಳಿಯ ಶುಭಾಶಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಹಿಂದೂ ಅರ್ಚಕರು ಕಾರ್ಯಕ್ರಮವನ್ನು ನಡೆಸಿಕೊಟ್ಟರು. ಕಾರ್ಯಕ್ರಮದಲ್ಲಿ ಅನೇಕ ಅನಿವಾಸಿ ಭಾರತೀಯರೂ ಭಾಗವಹಿಸಿದ್ದರು. id='are-slot-1' class='oiad oi-axt oiadv'> id='top-searched-articles'>(ಏಜನ್ಸೀಸ್)












Click it and Unblock the Notifications