ದೀಪಾವಳಿಗೆ ಹೆಚ್ಚುವರಿ ಬಸ್ ಸೌಲಭ್ಯ

ಈ ವಿಶೇಷ ಬಸ್ ಸಂಚಾರ ಗುರುವಾರದಿಂದಲೇ ಆರಂಭವಾಗಿದ್ದು, ಇದೇ 19ರವರೆಗೆ ಜಾರಿಯಲ್ಲಿರುತ್ತದೆ. ಧರ್ಮಸ್ಥಳ, ಕುಕ್ಕೆ ಸುಬ್ರಮಣ್ಯ, ತಿರುಪತಿ, ಶಿವಮೊಗ್ಗ, ಹಾಸನ, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಬಿಜಾಪುರ, ರಾಯಚೂರು, ಗುಲ್ಬರ್ಗಾ, ಬಳ್ಳಾರಿಗೆ ವಿಶೇಷ ಬಸ್ ಗಳು ಕೆಂಪೇಗೌಡ ಬಸ್ ನಿಲ್ದಾಣದಿಂದ ಸಂಚರಿಸಲಿವೆ.
ಮೈಸೂರು, ಹುಣಸೂರು, ಪಿರಿಯಾಪಟ್ಟಣ, ವಿರಾಜಪೇಟೆ, ಕುಶಾಲನಗರ, ಮಡಿಕೇರಿ ಕಡೆಗೆ ಸಂಚರಿಸುವ ಬಸ್ಸುಗಳು ಮೈಸೂರು ರಸ್ತೆಯ ಸ್ಯಾಟಲೈಟ್ ನಿಲ್ದಾಣದಿಂದ ಹೊರಡಲಿವೆ. ಮಧುರೈ, ಕುಂಬಕೋಣಂ, ಚೆನ್ನೈ, ಕೊಯಮತ್ತೂರು, ಇತರೆ ಪ್ರದೇಶಗಳಿಗೆ ತೆರಳುವ ಬಸ್ಸುಗಳು(ವೋಲ್ವೋ ಹೊರತುಪಡಿಸಿ) ಶಾಂತಿನಗರ ಬಸ್ ನಿಲ್ದಾಣದಿಂದ ಹೊರಡಲಿವೆ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications