ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಾಕಿಸ್ತಾನ : 24 ಗಂಟೆಗಳಲ್ಲಿ 5 ಸ್ಫೋಟಗಳು

|
Google Oneindia Kannada News

Peshawar bomb blast
ಪೇಷಾವರ್ , ಅ. 16 : ತಾಲಿಬಾನ್ ಉಗ್ರರು ಪಾಕಿಸ್ತಾನದಲ್ಲಿ ರಕ್ತದೋಕುಳಿಯನ್ನು ಮುಂದುವರಿಸಿದ್ದಾರೆ. ಪೇಶಾವರದ ಕಂಟೋನ್ಮೆಂಟ್ ಪ್ರದೇಶದಲ್ಲಿ ಸ್ಫೋಟಕಗಳನ್ನು ಹೊಂದಿದ್ದ ಕಾರು ಸ್ಫೋಟಗೊಂಡಿದ್ದು, 6 ಮಂದಿ ಮೃತಪಟ್ಟಿದ್ದಾರೆ. ಬರೀ 24 ಗಂಟೆಯೊಳಗೆ ಪಾಕಿಸ್ತಾನದಲ್ಲಿ 5 ಬಾಂಬ್ ಸ್ಫೋಟಗಳು ನಡೆದಿದ್ದು, 50ಕ್ಕೊ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ.

ಗುರುವಾರ ಬೆಳಗ್ಗೆ ಪ್ರತ್ಯೇಕ ತಂಡವಾಗಿ ಶಸ್ತ್ರಸಜ್ಜಿತರಾಗಿ ದಾಳಿ ನಡೆಸಿ ತಾಲಿಬಾನ್ ಉಗ್ರರು ಲಾಹೋರ್ ನ ಫೆಡರಲ್ ಇನ್ವೆಸ್ಟಿಗೇಷನ್ ಏಜನ್ಸಿ ಕಚೇರಿ, ಎಲೈಟ್ ಪೋರ್ಸ್ ಪೊಲೀಸ್ ತರಬೇತಿ ಕೇಂದ್ರ ಹಾಗೂ ಮಾನವನ್ ಪೊಲೀಸ್ ತರಬೇತಿ ಕೇಂದ್ರದ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಉಗ್ರರು ಈ ಮೂರು ಸ್ಥಳಗಳಿಗೆ ನುಗ್ಗಿ ಅಲ್ಲಿದ್ದವರ ಮೇಲೆ ಗುಂಡಿನ ದಾಳಿ ನಡೆಸಿದ್ದಲ್ಲದೆ, ಅವರನ್ನು ಒತ್ತೆಯಾಳಾಗಿರಿಸಿಕೊಂಡಿದ್ದರು. ಗಂಡಿನ ಚಕಮಕಿಯಲ್ಲಿ 11 ಮಂದಿ ಸಾವನ್ನಪ್ಪಿದ್ದರು.

ಎರಡು ತಾಸುಗಳ ನಿರಂತರ ಕಾರ್ಯಾಚರಣೆ ನಂತರ ಫೆಡರಲ್ ಇನ್ವೆಸ್ಟಿಗೇಷನ್ ಏಜನ್ಸಿ ಕಚೇರಿಯನ್ನು ಉಗ್ರರಿಂದ ವಶಪಡಿಸಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಮೂವರು ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದು, ಒಬ್ಬ ಉಗ್ರನನ್ನು ಹತ್ಯೆಗೈಯಲಾಗಿತ್ತು. ತೆಹ್ರಿಕ್ ಹಿ ತಾಲಿಬಾನ್ ದಾಳಿಯ ಹೊಣೆ ಹೊತ್ತುಕೊಂಡಿತ್ತು. ಪಾಕಿಸ್ತಾನ ವಶಕ್ಕೆ ತೆಗೆದುಕೊಂಡ ನಂತರ ಭಾರತದ ಮೇಲೆ ದಾಳಿ ನಡೆಸುತ್ತೇವೆ ಎಂದು ತಾಲಿಬಾನ್ ಉಗ್ರರ ಮುಖಂಡ ಹಕೀಮುಲ್ಲಾ ಮೆಹಸೂದ್ ಎಚ್ಚರಿಕೆ ನೀಡಿದ್ದಾನೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X