ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಕ್ಷರ ದಾಸೋಹ ಅಕ್ರಮ:ತನಿಖೆಗೆ ಸಮಿತಿ ರಚನೆ

|
Google Oneindia Kannada News

ಬೆಂಗಳೂರು, ಅ.17: ಅಕ್ಷರ ದಾಸೋಹ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಇಸ್ಕಾನ್ ಸಂಸ್ಥೆಯು ಸರ್ಕಾರದ ಈ ಕಾರ್ಯಕ್ರಮಕ್ಕಾಗಿ ಎಲ್ಲಾ ಸೌಲಭ್ಯಗಳನ್ನು ಸರ್ಕಾರದಿಂದ ಪಡೆದುಕೊಂಡೂ, ಸರ್ಕಾರದ ಗಮನಕ್ಕೆ ಬಾರದ ರೀತಿಯಲ್ಲಿ ಅವ್ಯವಹಾರ, ಅನುದಾನದ ದುರುಪಯೋಗ ನಡೆಸಿರುವ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ವಿಧಾನ ಸಭಾ ಸದಸ್ಯರಾದ ಎನ್ ಯೋಗೀಶ್ ಅವರ ಅಧ್ಯಕ್ಷತೆಯಲ್ಲಿ ಸದನ ಸಮಿತಿಯನ್ನು ಸಭಾಧ್ಯಕ್ಷರು ರಚಿಸಿದ್ದಾರೆ.

ಈ ಸಮಿತಿಯಲ್ಲಿ ವಿಧಾನಸಭಾ ಸದಸ್ಯರುಗಳಾದ ಅಪ್ಪಚ್ಚು ರಂಜನ್, ಬಿ.ಎನ್.ವಿಜಯಕುಮಾರ್, ಎಸ್.ಮುನಿರಾಜು, ನರಸಿಂಹ ನಾಯಕ್ (ರಾಜುಗೌಡ), ಎನ್.ಎಸ್.ನಂದೀಶ್ ರೆಡ್ಡಿ, ಡಿ.ಕೆ.ಶಿವಕುಮಾರ್, ಡಾ.ಹೆಚ್.ಸಿ.ಮಹದೇವಪ್ಪ, ಕೆ.ಎಂ.ಕೃಷ್ಣಮೂರ್ತಿ ಮತ್ತು ಸುನೀಲ್ ವಿ.ಹೆಗಡೆ ಸಮಿತಿಯ ಸದಸ್ಯರುಗಳಾಗಿದ್ದಾರೆ.

ಸಮಿತಿಯು ಮುಂದಿನ 3 ತಿಂಗಳ ಅವಧಿಯಲ್ಲಿ ಸಮಗ್ರ ತನಿಖೆ ನಡೆಸಿ ವರದಿಯನ್ನು ನೀಡಬೇಕೆಂದು ತಿಳಿಸಲಾಗಿದೆ.23.7.2009 ರಂದು ವಿಧಾನ ಸಭೆಯಲ್ಲಿ ಈ ವಿಚಾರ ಪ್ರಸ್ಥಾಪವಾಗಿದ್ದು ಸಭೆಯ ಅಭಿಪ್ರಾಯದಂತೆ ಸಭಾಧ್ಯಕ್ಷರು ಈ ತೀರ್ಮಾನ ಕೈಗೊಂಡಿದ್ದಾರೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X