ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪುರ ಯೋಜನೆ ಜಾರಿಗೆ ಕ್ಯಾಬಿನೆಟ್ ಒಪ್ಪಿಗೆ

|
Google Oneindia Kannada News

VS Acharya
ಬೆಂಗಳೂರು, ಅ. 22 : ರಾಜ್ಯದ 200 ಹೋಬಳಿಗಳಲ್ಲಿ ಮಾಜಿ ರಾಷ್ಟ್ರಪತಿ ಎಪಿಜೆ ಅಬ್ದುಲ್ ಕಲಾಂ ಅವರ ಪುರ ಯೋಜನೆ (Providing of Urban Amenities in Rural Areas) ಜಾರಿಗೆ ತರಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಗೃಹ ಸಚಿವ ವಿ ಎಸ್ ಆಚಾರ್ಯ ಹೇಳಿದರು.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಈ ಯೋಜನೆಯ ಪ್ರಮುಖ ಗುರಿಯಾಗಿದೆ ಎಂದರು. ರಾಜ್ಯದ 200 ಹೋಬಳಿಗಳಲ್ಲಿ ಪುರ ಯೋಜನೆ ಜಾರಿಗೆ ತರಲಾಗುವುದು. ಮುಖ್ಯವಾಗಿ ನೀರು, ವಿದ್ಯುತ್, ರಸ್ತೆ, ಶಾಲೆ, ದೂರವಾಣಿ ಸೇರಿದಂತೆ ಮೂಲಭೂತ ಸೌಕರ್ಯಗಳ ಬಗ್ಗೆ ಹೆಚ್ಚಿನ ಗಮನ ಗಮನಹರಿಸಲಾಗುವುದು. ಪ್ರತಿ ಗ್ರಾಮಕ್ಕೂ 1 ಕೋಟಿ ರುಪಾಯಿಗಳನ್ನು ಖರ್ಚು ಮಾಡಲಾಗುವುದು ಎಂದು ಹೇಳಿದರು.

ರಾಜ್ಯದ ರಸ್ತೆಗಳ ದುರಸ್ತಿಗೆ 195 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಲಾಗಿದೆ. ಜೊತೆಗೆ ಜಲನಿರ್ಮಾಣ ಯೋಜನೆಗೆ 1100 ಕೋಟಿ ರುಪಾಯಿಗಳ ಬೇಕಿದ್ದು. ವಿಶ್ವಬ್ಯಾಂಕ್ ಸಹಾಯದಡಿ ಯೋಜನೆ ಜಾರಿಗೆ ತರಲಾಗುವುದು ಎಂದು ಆಚಾರ್ಯ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X