ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ

|
Google Oneindia Kannada News

Do we need another war?
(ಮುಂದುವರಿದಿದೆ...)

ರಣಕಹಳೆ..

ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ.

* ಚೀನಾವು ಪಾಕ್‌ಗೆ ಲಾಗಾಯ್ತಿನಿಂದಲೂ ಶಸ್ತ್ರಾಸ್ತ್ರ ಸರಬರಾಜು ಮಾಡುತ್ತಿದೆ.
* ಪಾಕಿಸ್ತಾನವು ಶ್ರೀಲಂಕಾಕ್ಕೆ ಶಸ್ತ್ರಾಸ್ತ್ರ ಮಾರಾಟ ಮಾಡುತ್ತಿದೆ.

ಈ ಎಲ್ಲ ಆಗುಹೋಗುಗಳನ್ನೂ ಭಾರತವು ಕ್ಷ-ಕಿರಣದ ಕಣ್ಣುಗಳಿಂದ ನೋಡಬೇಕಾದುದು ಭಾರತದ ರಕ್ಷಣೆಯ ದೃಷ್ಟಿಯಿಂದ ಇಂದು ಅನಿವಾರ್ಯ. ಭಾರತಕ್ಕೆ ಚೀನಾದಿಂದ ಎದುರಾಗಲಿರುವ ಅಪಾಯದ ಬಗ್ಗೆ ಜಾರ್ಜ್ ಫರ್ನಾಂಡಿಸ್ ಅವರು ಭಾರತದ ರಕ್ಷಣಾ ಮಂತ್ರಿಯ ಕುರ್ಚಿಯಿಂದಲೇ ಎಚ್ಚರಿಸಿದ್ದರು. ಇದೀಗ ಆ ಅಪಾಯ ಸಮೀಪಿಸುತ್ತಿರುವಂತಿದೆ. ಭಾರತ ಎಚ್ಚತ್ತುಕೊಳ್ಳಬೇಕು.

ಯುದ್ಧ ಬೇಡ

ಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. ವಿವಿಧ ದೇಶಗಳ ಸಹಮತಕ್ಕಾಗಿ ಭಾರತವು ಅಂತರರಾಷ್ಟ್ರೀಯ ವೇದಿಕೆಗಳಲ್ಲಿ ಪ್ರಯತ್ನವನ್ನು ಮಾಡಬೇಕು ಮತ್ತು ವಿವಿಧ ದೇಶಗಳ ಬೆಂಬಲಕ್ಕಾಗಿ ಸೂಕ್ತ ಲಾಬಿ ನಡೆಸುವ ಯೋಜನೆ ಹಾಕಿಕೊಳ್ಳಬೇಕು.

ಇಷ್ಟಾಗಿಯೂ ಯುದ್ಧ ತಪ್ಪದು ಎಂದರೆ, ಜೈ! ನಾವು ಜಯಿಸಿಯೇ ಸೈ!

ಭಾಗ : « 1 2 3

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X