ಇವಿಎಂಗಳಿಂದ ಮೋಸ ,ಬಿಜೆಪಿ ಕ್ಯಾತೆ

ಚುನಾವಣೆಯ ಫಲಿತಾಂಶಗಳು ಕಾಂಗ್ರೆಸ್ ಪರ ಹೊರಬೀಳುತ್ತಿದ್ದಂತೆಯೇ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ವಕ್ತಾರ ಮುಕ್ತಾರ್ ಅಬ್ಬಾಸ್ ನಕ್ವಿ, ಎಲೆಕ್ಟ್ರಾನಿಕ್ ಮತಯಂತ್ರ ಮೂಲಕ ಅವ್ಯವಹಾರ ನಡೆಸಲು ಸಾಧ್ಯ ಎನ್ನುವುದು ಈಗಾಗಲೇ ತಿಳಿದಿರುವ ಸಂಗತಿ. ಕಾಂಗ್ರೆಸ್ ಇಂದಿನ ಗೆಲುವು ಪೂರ್ವ ನಿಯೋಜಿತ ಗೆಲುವು. ಇದರಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಲೇವಡಿ ಮಾಡಿದ್ದಾರೆ.
ಕಳೆದ ಲೋಕಸಭೆ ಚುನಾವಣೆಯಲ್ಲಿ ದಾರುಣವಾಗಿ ಸೋತ ನಂತರ ಎಲೆಕ್ಟ್ರಾನಿಕ್ ಮತಯಂತ್ರದಲ್ಲಿ ಲೋಪವಿದೆ. ಅದರಿಂದ ಅವ್ಯವಹಾರ ನಡೆಸಬಹುದು. ಆದ್ದರಿಂದ ಮುಂದಿನ ಚುನಾವಣೆಗಳಲ್ಲಿ ಎಲೆಕ್ಟ್ರಾನಿಕ್ ಮತಯಂತ್ರಗಳ ಬಳಕೆ ಬೇಡ ಎಂದು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಕೇಂದ್ರ ಚುನಾವಣೆ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು.
(ಏಜನ್ಸೀಸ್)












Click it and Unblock the Notifications