ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಿಎಂ ಹುದ್ದೆಗೆ ಎನ್ ಸಿಪಿ ಅಭ್ಯರ್ಥಿ ಇಲ್ಲ, ಪವಾರ್

|
Google Oneindia Kannada News

Sharad Pawar
ಮುಂಬೈ, ಅ. 22 : ಮಹಾರಾಷ್ಟ್ರದ ಮುಂದಿನ ಮುಖ್ಯಮಂತ್ರಿಯನ್ನು ಆಯ್ಕೆ ಮಾಡುವ ಕೆಲಸವನ್ನು ಕಾಂಗ್ರೆಸ್ ಪಕ್ಷ ಮಾಡಲಿದೆ ಎಂದು ಕೇಂದ್ರ ಕೃಷಿ ಸಚಿವ ಹಾಗೂ ಎನ್ ಸಿಪಿ ಪಕ್ಷ ಪಕ್ಷ ಮುಖ್ಯಸ್ಥ ಶರದ್ ಪವಾರ್ ಸ್ಪಷ್ಟಪಡಿಸಿದರು.

ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಮೈತ್ರಿ ಪರ ಫಲಿತಾಂಶ ಹೊರಬೀಳುತ್ತಿದ್ದಂತೆಯೇ ಇತ್ತ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹಾಗೂ ಎನ್ ಸಿಪಿ ಪಕ್ಷಕ್ಕೆ ಮತದಾರರ ಬೆಂಬಲಿಸಿದ್ದಕ್ಕೆ ಅತೀವ ಸಂತಸ ವ್ಯಕ್ತಪಡಿಸಿದರು. ಕೇಂದ್ರ ಸರಕಾರ ಕೈಗೊಂಡ ಕಾರ್ಯಗಳಿಂದ ಮತದಾರರರು ಕಾಂಗ್ರೆಸ್ ಮತ ನೀಡಿದ್ದಾರೆ. ಮನಮೋಹನ್ ಸಿಂಗ್ ನೇತೃತ್ವದ ಸರಕಾರ ಜನಪರ ಸರಕಾರ ಎನ್ನುವುದಕ್ಕೆ ಈ ಚುನಾವಣೆಯ ಫಲಿತಾಂಶವೇ ಉತ್ತರ ಎಂದು ಪವಾರ್ ಹೇಳಿದರು.

ಮಹಾರಾಷ್ಟ್ರದ ಗ್ರಾಮೀಣ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಎನ್ ಸಿಪಿ ಪಕ್ಷಗಳು ಉತ್ತಮ ಪ್ರದರ್ಶನ ನೀಡಿವೆ. ನಮ್ಮ ನಿರೀಕ್ಷೆಗೂ ಮೀರಿ ಗ್ರಾಮೀಣ ಜನತೆ ನಮಗೆ ಬೆಂಬಲಿಸಿದ್ದಾರೆ. ಕೇಂದ್ರ ಸರಕಾರದ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ಗೆಲುವಿಗೆ ಪ್ರಮುಖ ಕಾರಣ ಎಂದು ಪವಾರ್ ಅಭಿಪ್ರಾಯಪಟ್ಟರು. ಇತ್ತೀಚಿನ ವರದಿಗಳು ಬಂದಾಗ 134 ಕಾಂಗ್ರೆಸ್ ಎನ್ ಸಿಪಿ, ಬಿಜೆಪಿ ಶಿವಸೇನೆ 100, ಎಂಎನ್ಎಸ್ 14, ಇತರರು 33 ಕ್ಷೇತ್ರಗಳಲ್ಲಿ ಮುನ್ನೆಡೆ ಗಳಿಸಿದ್ದಾರೆ. ಹರಿಯಾಣದಲ್ಲಿ 44 ಕಾಂಗ್ರೆಸ್, ಐಎನ್ಎಲ್ಡಿ 28, ಬಿಜೆಪಿ 4 ಕ್ಷೇತ್ರಗಳಲ್ಲಿ ಮುನ್ನೆಡೆ ಗಳಿಸಿದೆ. ಅರುಣಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಂಡ ಜಯಗಳಿಸುವ ಹಾದಿಯಲ್ಲಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X