ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವ ಹೂಡಿಕೆದಾರರ ಸಮಾವೇಶ ಮತ್ತೆ ಮುಂದಕ್ಕೆ

|
Google Oneindia Kannada News

Minister Murugesh Nirani
ಬೆಂಗಳೂರು ಅ. 24: 2010ರ ಜನವರಿ ತಿಂಗಳಲ್ಲಿ ನಡೆಸಲು ಉದ್ದೇಶಿಸಿದ್ದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶನವನ್ನು 2010 ರ ಜೂನ್ ಮೊದಲ ವಾರದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಬೃಹತ್ ಹಾಗೂ ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ತಿಳಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ನಡೆದ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ರಚಿಸಿರುವ ವಿಚಾರ ಕಾರ್ಯಪಡೆಯ ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿಗಳ ಸಭೆಯ ನಂತರ ಪತ್ರಕರ್ತರನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು.

ವಿವಿಧ ಕೈಗಾರಿಕೋದ್ಯಮಿಗಳ ಸಂಘಟನೆಗಳ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಹಾಗೂ ಸದ್ಯದ ಪ್ರವಾಹ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಜನವರಿ ತಿಂಗಳಲ್ಲಿ ಸಮಾವೇಶ ನಡೆಸುವುದು ಸೂಕ್ತವಲ್ಲ ಎಂಬ ಸಲಹೆ ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಜೂನ್ ತಿಂಗಳಲ್ಲಿ ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ನಡೆಸುವಂತೆ ಸೂಚಿಸಿದ್ದಾರೆ ಎಂದು ಮುರುಗೇಶ್ ನಿರಾಣಿ ಅವರು ತಿಳಿಸಿದರು.

ವಿಶ್ವ ಬಂಡವಾಳ ಹೂಡಿಕೆದಾರರ ಸಮಾವೇಶ ಜನವರಿ ಮಾಹೆಯಲ್ಲೇ ನಡೆಯುತ್ತದೆ ಎಂದುಕೊಂಡು ಅಧಿಕಾರಿಗಳು ಪೂರ್ವಭಾವಿ ಸಿದ್ದತೆಗಳನ್ನು ತೀವ್ರಗತಿಯಲ್ಲಿ ಕಾರ್ಯಪ್ರವೃತ್ತರಾಗಲು ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವರು, ಸಮಾವೇಶಕ್ಕೆ ಪಾಲುದಾರರಾಗಲು ದಕ್ಷಿಣ ಆಫ್ರಿಕಾ, ದಕ್ಷಿಣ ಕೋರಿಯಾ, ಜರ್ಮನಿ, ಬ್ರೆಜಿಲ್, ಜಪಾನ್ ಮತ್ತು ರಷ್ಯಾ ದೇಶಗಳೋಂದಿಗೆ ಮಾತುಕತೆ ನಡೆಸಲಾಗಿದೆ. ವಿದೇಶಿ ಬಂಡವಾಳ ಆಕರ್ಷಣೆಗೆ ಅಮೆರಿಕಾ, ಸ್ವೀಡನ್, ಚೀನಾ ಹಾಗೂ ಜಪಾನ್ ದೇಶಗಳಲ್ಲಿ ರೋಡ್‌ಶೋಗಳನ್ನು ನಡೆಸಿದ್ದು ಇತರೆ ದೇಶಗಳಲ್ಲೂ ಸಹ ರೋಡ್‌ಶೋ ನಡೆಸಲು ಉದ್ದೇಶಿಸಲಾಗಿದೆ ಎಂದರು.

ಸಮಾವೇಶ ನಡೆಯುವುದಕ್ಕೆ ಮುನ್ನ ಕೈಗಾರಿಕಾ ಪ್ರದೇಶಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಅಧಿಕಾರಿಗಳು ತುರ್ತು ಗಮನಹರಿಸಬೇಕಾಗಿದೆ . ಸುಮಾರು 70 ಕಂಪನಿಗಳು ಸಮಾವೇಶದಲ್ಲಿ ಭಾಗವಹಿಸಲು ನೊಂದಾಯಿಸಿಕೊಂಡಿವೆ. ಕೈಗಾರಿಕಾಭಿವೃದ್ಧಿಗಾಗಿ ಜನವರಿ ತಿಂಗಳ ಒಳಗಾಗಿ 50 ಸಾವಿರ ಎಕರೆ ಪ್ರದೇಶ ವಶಕ್ಕೆ ತೆಗೆದುಕೊಳ್ಳಲು ತೀರ್ಮಾನಿಸಲಾಗಿದ್ದು, ಭೂಸ್ವಾಧೀನ ಪ್ರಕ್ರಿಯೆಗೆ ಎಲ್ಲೂ ಸಹ ತೊಂದರೆ ಎದುರಾಗಿಲ್ಲ ಎಂದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಭೂಸ್ವಾಧೀನ ಪ್ರಕ್ರಿಯೆ ನಡೆಯಲಿದೆ ಎಂದು ಅವರು ನಿರಾಣಿ ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X