• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಚವಾಣ್, ಹೂಡಾ ಸಿಎಂ ಆಗಿ ಮುಂದುವರಿಕೆ

|

ನವದೆಹಲಿ, ಅ. 25 : ತೀವ್ರ ಕುತೂಹಲ ಕೆರಳಿಸಿದ್ದ ಮಹಾರಾಷ್ಟ್ರ, ಹರಿಯಾಣ ಪ್ರದೇಶ ಮುಖ್ಯಮಂತ್ರಿಗಳ ಆಯ್ಕೆ ಪ್ರಕ್ರಿಯೆ ಕೊನೆಗೂ ತೆರೆಬಿದ್ದಿದೆ. ಈ ಎರಡೂ ರಾಜ್ಯಗಳಲ್ಲಿ ಕಾಂಗ್ರೆಸ್ ಭರ್ಜರಿ ಜಯಗಳಿಸಿದ ನಂತರ ಮುಖ್ಯಮಂತ್ರಿ ಆಯ್ಕೆ ಭಾರಿ ಕಸರತ್ತು ಆರಂಭವಾಗಿತ್ತು. ಶನಿವಾರ ಮಧ್ಯರಾತ್ರಿ ಮಹಾರಾಷ್ಟ್ರಕ್ಕೆ ಅಶೋಕ್ ಚವಾಣ್ ಮತ್ತು ಹರಿಯಾಣ ರಾಜ್ಯಕ್ಕೆ ಭೂಪಿಂದರ್ ಸಿಂಗ್ ಹೂಡಾ ಅವರನ್ನೇ ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಸುವ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ.

ನವದೆಹಲಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಹಿರಿಯ ನಾಯಕರ ಸಭೆಯಲ್ಲಿ ಭೂಪಿಂದರ್ ಸಿಂಗ್ ಹೂಡಾ ಮತ್ತು ಅಶೋಕ್ ಚವಾಣ್ ಅವರನ್ನೇ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಯಿತು. ಮಧ್ಯರಾತ್ರಿ ಸಭೆ ಕೊನೆಗೊಂಡ ಬಳಿಕ ಮಹಾರಾಷ್ಟ್ರ ವೀಕ್ಷಕ ಎ ಕೆ ಅಂಟನಿ ಅವರು ಚವಾಣ್ ಅವರನ್ನು ಸಿಎಲ್ ಪಿ ನಾಯಕರನ್ನಾಗಿ ಮಾಡಿರುವುದನ್ನು ಪ್ರಕಟಿಸಿದರು. ಇಂದು ಸಂಜೆ ಹೂಡಾ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X