• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ನೆರೆ ಸಂತಸ್ಥರಿಗೆ ಸಾವಿರ ಮನೆ ನಿರ್ಮಾಣ : ಹೆಗ್ಗಡೆ

|

ಬೆಂಗಳೂರು, ಅ. 26 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ನೆರೆ ಸಂತ್ರಸ್ತರ ಪುನರ್ವಸತಿಯ ಕುರಿತು ಚರ್ಚೆ ನಡೆಸಿದರು.

ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನೆರೆ ಪೀಡಿತ ಪ್ರದೇಶದ 220 ಗ್ರಾಮಗಳ ಸ್ಥಳಾಂತರ ಪ್ರಕ್ರಿಯೆ ಪ್ರಾರಂಭವಾಗಿದ್ದು, 10-12 ದಿನಗಳಲ್ಲಿ ಸುಮಾರು 50 ಕಡೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ತಿಳಿಸಿದರು. ನೆರೆ ಸಂತ್ರಸ್ತರ ಪುನರ್ವಸತಿಗಾಗಿ ಕನಿಷ್ಠ 1 ಲಕ್ಷ ರುಪಾಯಿ ವೆಚ್ಚದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಎಲ್ಲರಿಗೂ ಒಂದೇ ಮಾದರಿಯ ಮನೆಗಳನ್ನು ನಿರ್ಮಿಸಲಾಗುವುದು. ಮನೆಗಳ ನಿರ್ಮಾಣಕ್ಕೆ ದಾನಿಗಳು ಮುಂದೆ ಬರುತ್ತಿದ್ದು, ಕೊಪ್ಪಳ ಜಿಲ್ಲೆಯಲ್ಲಿ ಕಲ್ಯಾಣಿ ಸಂಸ್ಥೆಯವರು 5,000 ಮನೆ ನಿರ್ಮಿಸಿಕೊಡುವ ಭರವಸೆ ನೀಡಿದ್ದಾರೆ. ಇನ್ನು ಆರೇಳು ತಿಂಗಳೊಳಗೆ ಪುನರ್ವಸತಿ ಕಾರ್ಯ ಪೂರ್ಣಗೊಳಿಸುವ ಉದ್ದೇಶವಿದೆ ಎಂದು ಮುಖ್ಯಮಂತ್ರಿಗಳು ವಿವರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಡಾ ವೀರೇಂದ್ರ ಹೆಗ್ಗಡೆ, ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ 1,000 ಮನೆ ನಿರ್ಮಾಣ ಮಾಡುವುದಾಗಿ ಮಾತು ಕೊಟ್ಟಿದ್ದು, ಅದರಂತೆ ಈ ಕೊಂಗವಾಡ ಗ್ರಾಮದಲ್ಲಿ ಮನೆ ನಿರ್ಮಿಸುವ ಕಾರ್ಯ ಪ್ರಾರಂಭವಾಗಿದೆ. ದಾನಿಗಳಿಂದ ಸಾಕಷ್ಟು ನೆರವು ದೊರೆಯುತ್ತಿದ್ದು, ಎಷ್ಟು ಧನ ಸಂಗ್ರಹವಾಗುವುದೋ ಅಷ್ಟು ಮನೆಗಳನ್ನು ಹೆಚ್ಚುವರಿಯಾಗಿ ನಿರ್ಮಿಸಲಾಗುವುದು ಎಂದು ತಿಳಿಸಿದರು. ಸರ್ಕಾರ ತೋರಿಸಿದ ಭೂಮಿಯಲ್ಲಿ ಮನೆ ನಿರ್ಮಿಸಲಾಗುವುದು. ಹಾಗೂ ನೆರೆ ಪೀಡಿತ ಪ್ರದೇಶಗಳಲ್ಲಿ ಜನವರಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯಡಿ ಸ್ವಸಹಾಯ ಸಂಘಗಳನ್ನು ಪ್ರಾರಂಭಿಸಲಾಗುವುದು ಎಂದು ತಿಳಿಸಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X