ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಗ್ರರ ನಿಗ್ರಹಕ್ಕೆ ಕಟಿ ಬದ್ಧ : ಕೃಷ್ಣ

|
Google Oneindia Kannada News

Krishna Yang Serge
ಬೆಂಗಳೂರು, ಅ. 27 : ಪಾಕಿಸ್ತಾನ-ಅಪಘಾನಸ್ತಾನ ಗಡಿ ಭಾಗದಲ್ಲಿ ತಾಲಿಬಾನ್ ಉಗ್ರರು ನಡೆಸುತ್ತಿರುವ ನರಮೇಧ ಸೇರಿದಂತೆ ವಿಶ್ವಕ್ಕೆ ಕಂಟಕವಾಗಿರುವ ಭಯೋತ್ಪಾದನೆ ನಿಗ್ರಹಕ್ಕೆ ಭಾರತ, ಚೀನಾ ಮತ್ತು ರಷ್ಯಾ ದೇಶಗಳು ಒಕ್ಕೂರಲಿನ ಮುದ್ರೆ ಹಾಕಿದವು.

ಇಂದು ಬೆಂಗಳೂರಿನ ಲೀಲಾ ಪ್ಯಾಲೇಸ್ ನಲ್ಲಿ ಮೂರು ದೇಶಗಳ ವಿದೇಶಾಂಗ ಸಚಿವರ ಮಹತ್ವದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದ್ದು, ಭಯೋತ್ಪಾದನೆ ಹತ್ತಿಕ್ಕುವಲ್ಲಿ ಕೈಜೋಡಿಸುವ ಅವಶ್ಯಕತೆಯನ್ನು ಪ್ರತಿಪಾದಿಸಲಾಯಿತು. ಜೊತೆಗೆ ಮೂರು ದೇಶಗಳ ಬಾಂಧವ್ಯ ವೃದ್ಧಿಗೆ ಸಂಬಂಧಿಸಿದಂತೆ ವ್ಯಾಪಾರ ವಹಿವಾಟು, ಭದ್ರತೆ, ಆರ್ಥಿಕ ಸಲಹೆ ಸೂಚನೆ, ಹವಾಮಾನ ವೈಪರೀತ್ಯ ಮತ್ತಿತರ ಮಹತ್ವದ ಸಂಗತಿಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಭಾರತದ ವಿದೇಶಾಂಗ ಸಚಿವ ಎಸ್ ಎಂ ಕೃಷ್ಣ, ಚೀನಾ ವಿದೇಶಾಂಗ ಸಚಿವ ಯಾಂಗ್ ಚಿಯಾಚಿ ಮತ್ತು ರಷ್ಯಾ ವಿದೇಶಾಂಗ ಸಚಿವ ಸರ್ಗಿ ಲಾವ್ ರೋವ್ ಸಭೆಯಲ್ಲಿ ಪಾಲ್ಗೊಂಡಿದ್ದರು. ಸಭೆ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಕೃಷ್ಣ, ಮೂರು ರಾಷ್ಟ್ರಗಳು ಭಯೋತ್ಪಾದನೆ ನಿಗ್ರಹಕ್ಕೆ ಬದ್ಧವಾಗಿವೆ. ಇಂದಿನ ಸಭೆಯಲ್ಲಿ ಭಯೋತ್ಪಾದನೆ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಪಾಕಿಸ್ತಾನ-ಅಪಘಾನಿಸ್ತಾನದಲ್ಲಿ ನಿತ್ಯ ನಡೆಯುತ್ತಿರುವ ಮಾರಣಹೋಮ ಬಗ್ಗೆ ಚರ್ಚೆ ನಡೆಸಲಾಯಿತು ಎಂದು ಹೇಳಿದರು. ಅರುಣಾಚಲ ಪ್ರದೇಶಕ್ಕೆ ಸಂಬಂಧಿಸಿದಂತೆ ಚೀನಾ ತಗಾದೆ ಚರ್ಚೆ ಬರಲಿಲ್ಲ ಎಂದು ಮೂಲಗಳು ತಿಳಿಸಿವೆ.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X