ಲವ್ ಜಿಹಾದ್ ಸಿಐಡಿ ತನಿಖೆಗೆ : ಆಚಾರ್ಯ

ಲವ್ ಜಿಹಾದ್ ಹೆಸರಿನಲ್ಲಿ ಯುವತಿಯರು ಬಲವಂತವಾಗಿ ಮತಾಂತರಗೊಂಡಿದ್ದಾರೆಯೇ ? ಈ ಜಾಲದ ಹಿಂದೆ ಯಾವ ಸಂಘಟನೆ ಇದೆ ? ಹಣಕಾಸಿನ ನೆರವು ಎಲ್ಲಿಂದ ಬರುತ್ತಿದೆ ಮತ್ತಿತರ ವಿಚಾರಗಳ ಬಗ್ಗೆ ಸೂಚನೆ ನೀಡಲಾಗಿದೆ ಎಂದು ಸಭೆ ಬಳಿಕ ಸಚಿವ ಆಚಾರ್ಯ ಮಾಧ್ಯಮ ಪ್ರತಿನಿಧಿಗಳಿಗೆ ವಿವರಿಸಿದರು.
ಮಾನವ ಕಳ್ಳ ಸಾಗಣೆ ವಿರೋಧಿ ಡಿಐಜಿ ಮಾಲಿನಿ ಕೃಷ್ಣಮೂರ್ತಿ ಅವರನ್ನು ತನಿಖಾ ಮುಖ್ಯಸ್ಥರಾಗಿ ನೇಮಕ ಮಾಡಲಾಗಿದೆ. ಕೇರಳಕ್ಕೂ ಒಂದು ತಂಡವನ್ನು ಕಳುಹಿಸಲು ನಿರ್ಧರಿಸಲಾಗಿದ್ದು, ಲವ್ ಜಿಹಾದ್ ನಡೆದಿದೆ ಎನ್ನಲಾದ ನಾಲ್ಕು ಜಿಲ್ಲೆಗಳಿಗೆ ಎಸ್ಪಿ ದರ್ಜೆಯ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ತಂಡ ತೆರಳಿ ಮಾಹಿತಿ ಸಂಗ್ರಹಿಸಲಿದೆ.
(ದಟ್ಸ್ ಕನ್ನಡ ವಾರ್ತೆ)











Click it and Unblock the Notifications