ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರೆಡ್ಡಿ ವಿರುದ್ದ ಯಡಿಯೂರಪ್ಪ ರಣಕಹಳೆ

|
Google Oneindia Kannada News

Yeddyurappa
ಬೆಂಗಳೂರು, ಅ. 27 : ನೆರೆ ಸಂತ್ರಸ್ಥರ ಮನೆಗಳ ನಿರ್ಮಾಣದ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರನ್ನು ಖುದ್ದು ಭೇಟಿ ಮಾಡಿ ಅಹ್ವಾನ ನೀಡುತ್ತೇನೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ. ಈ ಮೂಲಕ ತಮ್ಮ ವಿರುದ್ಧ ಬಂಡಾಯ ಎದ್ದಿರುವ ರೆಡ್ಡಿ ಸಹೋದರರಿಗೆ ಬಲವಾದ ಏಟು ನೀಡಲು ಸಿಎಂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ.

ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ರೆಡ್ಡಿ ಬೆಂಬಲಿಗ ಸಚಿವರನ್ನು ಹೊರತುಪಡಿಸಿ 26 ಸಚಿವರ ಸಭೆ ನಡೆಸಿದ ಯಡಿಯೂರಪ್ಪ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಇತ್ತೀಚೆಗೆ ಮಾಧ್ಯಮಗಳಲ್ಲಿ ಬರುತ್ತಿರುವ ಸಂಗತಿಗಳನ್ನು ಅಲ್ಲಗಳೆಯುವುದಿಲ್ಲ ಎಂದು ತಮ್ಮ ಮತ್ತು ರೆಡ್ಡಿಗಳ ನಡುವೆ ಭಿನ್ನಾಭಿಪ್ರಾಯ ಇರುವುದನ್ನು ಒಪ್ಪಿಕೊಂಡರು.

ನೆರೆ ಸಂತ್ರಸ್ಥರಿಗೆ ಮನೆ ನಿರ್ಮಾಣ ಮಾಡುವುದು ಸರಕಾರದ ಗುರಿ. ಈ ಬಗ್ಗೆ ಇಂದಿನ ಸಚಿವರ ಸಭೆಯಲ್ಲಿ ನಡೆಸಲಾಯಿತು. ಜೊತೆಗೆ ನವೆಂಬರ್ 2 ರಂದು ಸರಕಾರ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಸಂತ್ರಸ್ಥರಿಗೆ ಮನೆ ನಿರ್ಮಾಣ ಕಾರ್ಯಕ್ರಮದ ಶಂಕುಸ್ಥಾಪನೆ ಕಾರ್ಯಕ್ರಮ ಏರ್ಪಡಿಸಲಾಗಿದೆ. ಕೇಂದ್ರ ಗೃಹ ಸಚಿವ ಪಿ ಚಿದಂಬರಂ ಕಾರ್ಯಕ್ರಮ ಉದ್ಘಾಟಿಸಲು ಒಪ್ಪಿಕೊಂಡಿದ್ದಾರೆ. ಮಾಜಿ ರಾಷ್ಟ್ರಪತಿ ಅಬ್ಧುಲ್ ಕಲಾಂ ಹಾಗೂ ಮಾಜಿ ಪ್ರಧಾನಮಂತ್ರಿ ಎಚ್ ಡಿ ದೇವೇಗೌಡರಿಗೂ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗುವುದು. ಸಾಧ್ಯವಾದರೆ ಇಂದು ಮಧ್ಯಾಹ್ನ ದೇವೇಗೌಡರನ್ನು ಭೇಟಿ ಮಾಡಿ ಅಹ್ವಾನಿಸುತ್ತೇನೆ ಎಂದು ಯಡಿಯೂರಪ್ಪ ಹೇಳಿದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X