ಯಡಿಯೂರಪ್ಪಗೆ ಚನ್ನಪಟ್ಟಣ ರೈತರ ಹಿಡಿಶಾಪ

ವಿದ್ಯುತ್‌ನ್ನೇ ನಂಬಿ ಕೃಷಿ ಮತ್ತು ಸಣ್ಣ ಕೈಗಾರಿಕೆಗಳನ್ನ ನಡೆಸುತ್ತಿರುವ ಮಾಲೀಕರಿಗೆ ಅನಿಯಮಿತ ಲೋಡ್‌ಶೆಡ್ಡಿಂಗ್‌ನಿಂದ ಸಂಕಷ್ಟದಲ್ಲೇ ಬದುಕು ದೂಡುವಂತಾಗಿದೆ. ಬಿಜೆಪಿ ಸರ್ಕಾರದ ಉದಾಸೀನ ಮನೋಭಾವದಿಂದ ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣಸಂಕಟ ಎನ್ನವಂತಾಗಿದೆ. ಇದೇ ರೀತಿ ಮುಂದುವರೆದರೆ ಬಿಜೆಪಿ ಸರ್ಕಾರದ ವಿರುದ್ದ ಉಗ್ರ ಹೋರಾಟನಡೆಸುವುದಾಗಿ ರೈತರ ಮುಖಂಡ ಚಿಕ್ಕವೀರೇಗೌಡ ಎಚ್ಚರಿಸಿದ್ದಾರೆ.
ರೈತರ ಹೆಸರೇಳಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರೈತಸಮುದಾಯವನ್ನ ನಾಶಮಾಡುವತ್ತ ಅಧಿಕಾರ ನಡೆಸುತ್ತಿದ್ದಾರೆ. ಒಂದೆಡೆ ನೆರೆಯಿಂದ ರೈತರು ಬೀದಿಗೆ ಬಿದ್ದಿದ್ದಾರೆ ಇನ್ನೊಂದೆಡೆ ವಿದ್ಯುತ್ ಕ್ಷಾಮದಿಂದ ರೈತರು ಆತ್ಮಹತ್ಯೆಗೆ ಶರಣಾಗುವಂಥ ಪರಿಸ್ಥಿತಿ ನಿರ್ಮಾಣವಾಗಿದೆ. ಯಾವುದೇ ಒಂದು ರೀತಿಯಲ್ಲಿ ಉಪಯೋಗವಾಗುಂತಹ ಯೋಜನೆಗಳನ್ನು ನೀಡುವಲ್ಲಿ ಬಿಜೆಪಿ ಸರ್ಕಾರ ವಿಫಲವಾಗುವುದರಿಂದ ವಿದ್ಯುತ್ ಕ್ಷಾಮ ಎದುರಿಸುವಂತಾಗಿದೆ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ರಾಜ್ಯಾದ್ಯಂತ ಉತ್ತಮ ಮಳೆಯಾಗಿದ್ದು ವಿದ್ಯುತ್ ಉತ್ಪಾದನೆ ಮಾಡುವ ಜಲಾಶಯಗಳೆಲ್ಲ ತುಂಬಿ ಹರಿಯುತ್ತಿದ್ದರೂ ವಿದ್ಯುತ್ ಕ್ಷಾಮ ಆವರಿಸುವಂತೆ ಬಿಜೆಪಿ ಸರ್ಕಾರ ಮಾಡುತ್ತಿದೆ. ಅಸಮರ್ಪಕ ವಿದ್ಯುತ್ ಪೂರೈಕೆಯಿಂದ ನೇಗಿಲಯೋಗಿಗಳು ಸಂಕಷ್ಟದ ಸುಳಿಯಲ್ಲೇ ಸಿಲುಕಿದ್ದಾರೆ, ಆದರೂ ನಿರ್ಲಕ್ಷ್ಯ ಮಾಡಿರುವ ಬಿಜೆಪಿ ಸರ್ಕಾರದ ವಿರುದ್ದ ರೈತರು ತಿರುಗಿಬೀಳುವ ಕಾಲ ದೂರವಿಲ್ಲವೆಂದು ರೈತಸಂಘ ಎಚ್ಚರಿಸಿದೆ.
ಒಟ್ಟಾರೆ ಸರ್ಕಾರಕ್ಕೆ ಇಚ್ಚಾಶಕ್ತಿ ಮತ್ತು ಅನುಭವದ ಕೊರತೆಯೇ ರಾಜ್ಯ ಕಗ್ಗತ್ತಲಲ್ಲಿ ಮುಳುಗುವಂತಾಗಿದೆ ಎಂದು ಜನತೆ ಆಕ್ರೋಶವ್ಯಕ್ತಪಡಿಸುತ್ತಿದ್ದಾರೆ. ವಿದ್ಯುತ್‌ನ್ನೇ ನಂಬಿ ಕುಳಿತಿರುವ ಮಂದಿ ಸರ್ಕಾರಕ್ಕೆ ಹಿಡಿ ಶಾಪ ಹಾಕುತ್ತಿದ್ದಾರೆ. ಸರ್ಕಾರ ಇನ್ನು ಮುಂದಾದರೂ ಮಲತಾಯಿ ಧೋರಣೆ ಬಿಟ್ಟು ಗ್ರಾಮೀಣ ಮತ್ತು ನಗರ ಪ್ರದೇಶಗಳಿಗೆ ಸಮರ್ಪಕ ವಿದ್ಯುತ್ ಸರಬರಾಜು ಮಾಡುವುದೇ ಎಂಬುದನ್ನ ಕಾಲವೇ ಉತ್ತರಿಸಬೇಕಾಗಿದೆ.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ಬೆಂಗಳೂರಿನಲ್ಲಿ ಇಂದು ಶ್ರೀ ಎಂ ಅವರ "ಉಪನಿಷತ್ತುಗಳು ಮತ್ತು ಜೆ.ಕೃಷ್ಣಮೂರ್ತಿ" ಹೊಸ ಕೃತಿ ಬಿಡುಗಡೆ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ











Click it and Unblock the Notifications