ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬಿಜೆಪಿ ಬಿಕ್ಕಟ್ಟು ಪರಿಹರಿಸಲು ಬಂದ ಜೈಟ್ಲಿ

|
Google Oneindia Kannada News

Rift in BJP ; Jaitley to mediate
ಬೆಂಗಳೂರು, ಅ. 28 : ಕೊನೆಗೂ ಯಡಿಯೂರಪ್ಪ, ರೆಡ್ಡಿಗಳ ನಡುವಿನ ಕದನ ತೀವ್ರಗೊಂಡ ಹಿನ್ನೆಲೆಯಲ್ಲಿ ದೆಹಲಿಯಿಂದ ದೌಡಾಯಿಸಿರುವ ಹಿರಿಯ ನಾಯಕ ಅರುಣ್ ಜೈಟ್ಲಿ ತೇಪೆ ಹಾಕುವ ಕಾರ್ಯದಲ್ಲಿ ನಿರತರಾಗಿದ್ದಾರೆ. ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ರೆಡ್ಡಿ ಸಹೋದರರ ಮತ್ತು ಶ್ರೀರಾಮುಲು ಜೈಟ್ಲಿ ಜೊತೆ ಗಹನ ಚರ್ಚೆಯಲ್ಲಿ ತೊಡಗಿದ್ದಾರೆ. ಆದರೆ ರೆಡ್ಡಿಗಳಿಂದ ಬಂದಿರುವ ಪ್ರತಿಕ್ರಿಯೆಗಳು ಲಭ್ಯವಾಗಿಲ್ಲ.

ನಗರದ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಜೈಟ್ಲಿ ಜೊತೆಗೆ ಮಾತುಕತೆ ನಡೆಸಲಾಗಿದೆ. ನೆರೆ ಸಂತ್ರಸ್ಥರಿಗೆ ಮನೆಗಳ ನಿರ್ಮಾಣಕ್ಕೆ ಸಂಬಂಧಿಸಿದಂತೆ ಸಿರಗುಪ್ಪ ತಾಲ್ಲೂಕಿನಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಚಿವ ಜನಾರ್ದನರೆಡ್ಡಿ, ಶ್ರೀರಾಮುಲು ಮುಖ್ಯಮಂತ್ರಿಗಳ ವಿರುದ್ಧ ನಡೆಸಿದ ವೈಯಕ್ತಿಕ ಟೀಕಾ ಪ್ರಹಾರ, ಸಿಎಂ ಬದಿಗಿರಿಸಿ ಸಂತ್ರಸ್ಥರಿಗೆ ಮನೆ ನಿರ್ಮಾಣ ಕಾರ್ಯಕ್ಕೆ ಚಾಲನೆ ನಡೆಸಿದ್ದು, ಇತ್ತೀಚೆಗೆ ರಾಜ್ಯ ರಾಜಕೀಯದಲ್ಲಿ ನಡೆದ ಬೆಳವಣಿಗೆಗಳನ್ನು ಯಡಿಯೂರಪ್ಪ ಅರುಣ್ ಜೈಟ್ಲಿ ಜೊತೆ ಸುದೀರ್ಘ ಮಾತುಕತೆ ನಡೆಸಿದ್ದಾರೆ.

ಸಭೆ ನಂತರ ಮಾತನಾಡಿದ ಯಡಿಯೂರಪ್ಪ, ನಮ್ಮಲ್ಲಿ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ. ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರ ಬೆಂಬಲಕ್ಕೆ ನಿಂತಿದೆ ಎನ್ನಲಾಗಿದೆ. ಪದೇಪದೇ ಮುಖ್ಯಮಂತ್ರಿ ವಿರುದ್ಧ ನಡೆಸುತ್ತಿರುವ ಟೀಕೆಗಳ ಬಗ್ಗೆ ಜೈಟ್ಲಿ ಕೂಡಾ ರೆಡ್ಡಿ ಸಹೋದರರ ಧೋರಣೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಅವುಗಳನ್ನು ಬಗೆಹರಿಸಿಕೊಳ್ಳುತ್ತೇವೆ. ಪಕ್ಷದ ಆಂತರಿಕ ವಿಷಯವನ್ನು ಮಾಧ್ಯಮದ ಮುಂದೆ ಹಂಚಿಕೊಳ್ಳಲು ಸಾಧ್ಯವಿಲ್ಲ ಎಂದು ಜೈಟ್ಲಿ ಹೇಳಿದರು.

ಸಿಎಂ ರಾಜೀನಾಮೆಗೆ ಆಗ್ರಹ

ಬಳ್ಳಾರಿಯಲ್ಲಿ ಸಭೆ ಸೇರಿದ ರೆಡ್ಡಿ ಬೆಂಬಲಿಗ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ. ಅನಗತ್ಯವಾಗಿ ಆಡಳಿತದಲ್ಲಿ ಕೈಹಾಕುವುದು. ಅಧಿಕಾರಿಗಳ ವರ್ಗಾವಣೆ ಮಾಡುತ್ತಿರುವ ಸಿಎಂ ಕಾರ್ಯವೈಖರಿಗೆ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತವಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಒತ್ತಾಯಿಸಿದ್ದಾರೆ. ಸಭೆಯಲ್ಲಿ ಸಂಸದೆ ಶಾಂತಾ, ರಾಯಚೂರು ಸಂಸದ ಸಣ್ಣಫಕ್ಕೀರಪ್ಪ, ಶಾಸಕರಾದ ಸೋಮಶೇಖರರೆಡ್ಡಿ, ನೇಮರಾಜ್ ನಾಯಕ್, ಸೋಮಲಿಂಗಪ್ಪ, ಸುರೇಶ್ ಬಾಬು, ಚಂದ್ರನಾಯಕ್ ಪಾಲ್ಗೊಂಡಿದ್ದರು.

(ದಟ್ಸ್ ಕನ್ನಡ ವಾರ್ತೆ)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X