ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ವಿಶ್ವಸಂಸ್ಥೆ ಕಚೇರಿ ಮೇಲೆ ತಾಲಿಬಾನಿಗಳ ದಾಳಿ

|
Google Oneindia Kannada News

Kabul Blast
ಕಾಬೂಲ್, ಅ. 28 : ತಾಲಿಬಾನ್ ಉಗ್ರರು ನಗರದಲ್ಲಿರುವ ವಿಶ್ವಸಂಸ್ಥೆಯ ಅತಿಥಿಗೃಹದ ಮೇಲೆ ಶಸ್ತ್ರಾಸ್ತ್ರ ಸಮೇತರಾಗಿ ದಾಳಿ ನಡೆಸಿ ಮೂರು ವಿಶ್ವಸಂಸ್ಥೆ ಸಿಬ್ಬಂದಿ ಸೇರಿ 7 ಮಂದಿಯನ್ನು ಹತ್ಯೆಗೈದಿರುವ ಘಟನೆ ಬುಧವಾರ ಬೆಳಗ್ಗೆ ನಡೆದಿದೆ.

ಇಂದು ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ನಡೆದಿದ್ದು, ನಾಲ್ಕರಿಂದ ಐದು ಉಗ್ರರು ಶಸ್ತ್ರಾಸ್ತ್ರಗಳ ಸೇಮತ ವಿಶ್ವಸಂಸ್ಥೆಯ ಅತಿಥಿಗೃಹ ಮೇಲೆ ದಾಳಿ ನಡೆಸಿದ್ದಾರೆ. ಅಲ್ಲಿದ್ದವರ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿದ್ದರಿಂದ ಮೂರು ವಿಶ್ವಸಂಸ್ಥೆ ಸಿಬ್ಬಂದಿ ಸೇರಿ 7 ಮಂದಿ ಸ್ಥಳದಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರತ್ಯಕ್ಷದರ್ಶಿ ತಿಳಿಸಿದ್ದಾರೆ.

ಘಟನೆಯ ಹೊಣೆಯನ್ನು ತಾಲಿಬಾನ್ ಉಗ್ರರು ಹೊತ್ತುಕೊಂಡಿದ್ದಾರೆ. ಮುಂಬರುವ ಅಧ್ಯಕ್ಷೀಯ ಚುನಾವಣೆ ಇರುವ ಹಿನ್ನೆಲೆಯಲ್ಲಿ ಈ ಕೃತ್ಯ ಎಸಗಿರುವುದಾಗಿ ಉಗ್ರರು ಹೇಳಿಕೊಂಡಿದ್ದಾರೆ. ಭಯೋತ್ಪಾದಕರ ದಾಳಿಯಿಂದಾಗಿ ವಿಶ್ವಸಂಸ್ಥೆ ಕಟ್ಟಡದಲ್ಲಿ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ನಂದಿಸುವ ಯತ್ನದಲ್ಲಿ ಅಗ್ನಿಶಾಮಕ ದಳ ನಿರತವಾಗಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X