ರೆಡ್ಡಿಗಳಿಗೆ ಮತ್ತೊಂದು ಶಾಕ್ ನೀಡಿದ ಸಿಎಂ

Renukacharya
ಬೆಂಗಳೂರು, ಅ. 29 : ರೆಡ್ಡಿ ಸೊಕ್ಕಡಗಿಸಲು ಹಠತೊಟ್ಟಂತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮತ್ತೊಂದು ಶಾಕ್ ನೀಡಿದ್ದಾರೆ. ಬಳ್ಳಾರಿ ಜಿಲ್ಲೆಯ ಹೆಚ್ಚವರಿ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕುರೇರಾ ಅವರನ್ನೂ ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಈ ಮೂಲಕ ಗದಗ ಮತ್ತು ಬಳ್ಳಾರಿಯಲ್ಲಿ ವರ್ಗಾವಣೆಗೊಂಡ ಅಧಿಕಾರಿಗಳ ಸಂಖ್ಯೆ 21 ಕ್ಕೆ ಏರಿದೆ.

ಇನ್ನೊಂದಡೆ ಹೈದರಾಬಾದ್ ನಲ್ಲಿ ಸುಮಾರು 15 ಶಾಸಕರೊಂದಿಗೆ ಸಭೆ ನಡೆಸಿರುವ ಜನಾರ್ದನರೆಡ್ಡಿ, ಶತಾಯಗತಾಯ ಮುಖ್ಯಮಂತ್ರಿ ಅವರನ್ನು ಕೆಳಗಿಳಿಸಲೇಬೇಕು ಎಂದು ನಿರ್ಧರಿಸಿದಂತಿದೆ. ಜಗದೀಶ್ ಶೆಟ್ಟರ್ ಅವರಿಗೆ ಒಳ್ಳೆಯ ಕಾಲ ಬಂದಿದೆ. ಅರು ಮುಖ್ಯಮಂತ್ರಿ ಆಗಬೇಕು ಎಂದು ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹೇಳಿಕೆ ನೀಡುತ್ತಿದ್ದಾರೆ. ಶೋಭಾ ಕರಂದ್ಲಾಜೆ ಮತ್ತು ಯಡಿಯೂರಪ್ಪ ಅವರ ಸರಕಾರವಲ್ಲ. ಅವರ ಕಾಲ ಮುಗಿಯಿತು. ಈಗೇನಿದ್ದರೂ ಹೊಸ ನಾಯಕನ ಆಯ್ಕೆ ಪ್ರಕ್ರಿಯೆ ಆರಂಭವಾಗಿದೆ ಎಂದು ರೇಣುಕಾಚಾರ್ಯ ಟಾಂಟಾಂ ಹೊಡೆಯುತ್ತಿದ್ದಾರೆ.

ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ಯಡಿಯೂರಪ್ಪ ಇಂದು ತಮ್ಮ ನಿವಾಸದಲ್ಲಿ ಶಾಸಕರ ಸಭೆ ಕರೆದಿದ್ದರು. ಆದರೆ, ದಿಢೀರ್ ಆಗಿ ಸಭೆಯನ್ನು ಮಾಡಿರುವುದು ಭಾರಿ ಕೋಲಾಹಲಕ್ಕೆ ಕಾರಣವಾಗಿದೆ.

(ದಟ್ಸ್ ಕನ್ನಡ ವಾರ್ತೆ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+