ಸಚಿವ ಸಂಪುಟ ವಿಸ್ತರಣೆಗೆ ಯಡಿಯೂರಪ್ಪ ಸಮ್ಮತಿ

ರಾಜ್ಯ ರಾಜಕೀಯದಲ್ಲಿ ಆಗುತ್ತಿರುವ ಬೆಳವಣಿಗೆ ಹಿನ್ನೆಲೆಯಲ್ಲಿ ಸ್ಪಿಕರ್ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ತೆಗೆದುಕೊಳ್ಳಲು ಯಡಿಯೂರಪ್ಪ ಸಮ್ಮತಿಸಿದ್ದಾರೆ. ಆದರೆ, ಮುಖ್ಯಮಂತ್ರಿಯ ವಿಶ್ವಾಸ ಕಳೆದುಕೊಂಡಿರುವ ಹಾಗೂ ರೆಡ್ಡಿ ಬಣದಲ್ಲಿ ಗುರುತಿಸಿಕೊಂಡಿರುವ ಸಚಿವ ಶಿವರಾಜ್ ತಂಗಡಗಿ, ವೆಂಕಟರಮಣಪ್ಪ ಮತ್ತು ಗೂಳಿಹಟ್ಟಿ ಶೇಖರ್ ಅವರಿಗೆ ಕೊಕ್ ನೀಡಲು ಮುಖ್ಯಮಂತ್ರಿ ನಿರ್ಧರಿಸಿದ್ದಾರೆ.
ಪರ್ಯಾಯ ನಾಯಕತ್ವ ಮಾತುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಜಗದೀಶ್ ಶೆಟ್ಟರ್ ಅವರನ್ನು ಸಂಪುಟಕ್ಕೆ ತೆಗೆದುಕೊಂಡು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಖ್ಯಮಂತ್ರಿ ತಂತ್ರ ರೂಪಿಸಿದ್ದಾರೆ. ಆದರೆ, ಶೆಟ್ಟರ್ ಮುಖ್ಯಮಂತ್ರಿಗಳ ಆಫರ್ ನ್ನು ನಿರಾಕರಿಸಿದ್ದಾರೆ ಎನ್ನಲಾಗಿದೆ. ಇನ್ನೊಂದಡೆ ಸರಕಾರದಲ್ಲಿ ಹಸ್ತಕ್ಷೇಪ ಮಾಡುತ್ತಿರುವ ಶೋಭಾ ಕರಂದ್ಲಾಜೆ, ಬಸವರಾಜ ಬೊಮ್ಮಾಯಿ ಮತ್ತು ವಿ ಎಸ್ ಆಚಾರ್ಯ ಅವರನ್ನು ಕೈಬಿಡುವಂತೆ ಭಿನ್ನರಿಂದ ಬೇಡಿಕೆ ಬಂದಿದೆ ಎನ್ನಲಾಗಿದೆ. ಆ ಬಗ್ಗೆ ಏನೂ ಸ್ಪಷ್ಟವಾಗಿಲ್ಲ.
(ದಟ್ಸ್ ಕನ್ನಡ ವಾರ್ತೆ)












Click it and Unblock the Notifications