ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮುಂಬೈ : ಎನ್ಸಿಪಿಯಲ್ಲಿ ದಾದಾಗಿರಿ

|
Google Oneindia Kannada News

Ajit Pawar
ಮುಂಬೈ, ಅ. 29 : ಕರ್ನಾಟಕದ ಬಿಜೆಪಿ ಸರಕಾರದಲ್ಲಿ ಅಲ್ಲೋಕಲ್ಲೋಲ ವಾತಾವರಣ ನಿರ್ಮಾಣವಾಗಿರುವ ಬೆನ್ನಲ್ಲೇ ಮಹಾರಾಷ್ಟ್ರ ರಾಜಕಾರಣದಲ್ಲಿ ಭಾರಿ ರಾಜಕೀಯ ಬೆಳವಣಿಗೆ ಉಂಟಾಗುವ ಸಾಧ್ಯತೆ ಇದೆ. ನಾಯಕತ್ವ ವಿರುದ್ಧ ಬಂಡೆದ್ದಿರುವ ಕೇಂದ್ರ ಸಚಿವ ಶರದ್ ಪವಾರ್ ಅವರ ಅಳಿಯ ಅಜಿತ್ ಪವಾರ್ (ದಾದಾ) ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ಶಿವಸೇನೆ ಜೊತೆಗೆ ಕೈಜೋಡಿಸುವಂತ ಬೆಳವಣಿಗೆ ನಡೆಯುತ್ತಿರುವುದು ತೀವ್ರ ಕುತೂಹಲ ಮೂಡಿಸಿದೆ.

ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎನ್ನುವುದು ಎನ್ಸಿಪಿ ಒಂದು ವಲಯದ ಶಾಸಕರ ಅಭಿಪ್ರಾಯವಾಗಿದೆ. ಆದರೆ, ಅಜಿತ್ ಪವಾರ್ ಅವರನ್ನು ಉಪಮುಖ್ಯಮಂತ್ರಿ ಮಾಡಲು ಎನ್ ಸಿಪಿ ನಾಯಕ ಶರದ್ ಪವಾರ್ ಸಿದ್ಧರಿಲ್ಲ. ಇದರಿಂದ ಬೇಸತ್ತಿರುವ ಎನ್ಪಿಸಿಗೆ ಶಾಸಕರು ಬಿಜೆಪಿ ಶಿವಸೇನೆ ಕಡೆಗೆ ಮುಖಮಾಡಿದ್ದಾರೆ. ಬಿಜೆಪಿ ಶಿವಸೇನೆ ಪಕ್ಷಗಳು ಅಜಿತ್ ಪವಾರ್ ಅವರನ್ನು ಮುಖ್ಯಮಂತ್ರಿಯನ್ನಾಗಿಸಲು ಮುಂದೆ ಬಂದಿವೆ ಎನ್ನಲಾಗಿದೆ. ಕಾಂಗ್ರೆಸ್ ಮತ್ತು ಎನ್ಸಿಪಿ ಶಾಸಕರು ಈ ಬಗ್ಗೆ ತೀವ್ರ ಭಯಭೀತರಾಗಿರುವ ಸಂಗತಿ ಹೊರಬಿದ್ದಿದೆ.

ಇತ್ತೀಚೆಗೆ ಮಹಾರಾಷ್ಟ್ರದಲ್ಲಿ ನಡೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಎನ್ಸಿಪಿ ಮೈತ್ರಿ ಜಯಗಳಿಸಿತ್ತು. ಮುಖ್ಯಮಂತ್ರಿ ಸ್ಥಾನ ಕಾಂಗ್ರೆಸ್ ಪಾಲಾದರೆ, ಉಪಮುಖ್ಯಮಂತ್ರಿ ಸ್ಥಾನ ಎನ್ಸಿಪಿ ಪರ ಇತ್ತು. ಎನ್ಸಿಪಿ ಅಧ್ಯಕ್ಷ ಶರದ್ ಪವಾರ್ ಅವರು ಎನ್ಪಿಸಿ ಶಾಸಕಾಂಗ ಪಕ್ಷದ ನಾಯಕ ಹಾಗೂ ಉಪಮುಖ್ಯಮಂತ್ರಿಯಾಗಿ ಛಗನ್ ಭುಜಬಲ್ ಅವರನ್ನು ನೇಮಿಸಿರುವುದು ಅಜಿತ್ ಪವಾರ್ ಅವರ ಆಕ್ರೋಶಕ್ಕೆ ಕಾರಣವಾಗಿದೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X