ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹಾರಾಷ್ಟ್ರ : ಕಾಂಗ್ರೆಸ್, ಎನ್ಸಿಪಿ ಪೀಕಲಾಟ

|
Google Oneindia Kannada News

Ashok Chavan
ಮುಂಬೈ, ನ. 4 : ಇತ್ತೀಚೆಗೆ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಭರ್ಜರಿ ಜಯಗಳಿಸಿರುವ ಕಾಂಗ್ರೆಸ್ ಎನ್ ಸಿಪಿಗಳ ಸೀಟು ಹಂಚಿಕೆ ವಿಳಂಬ ಮುಂದುವರೆದಿದ್ದು, 24 ಗಂಟೆಗಳಲ್ಲಿ ಪೂರ್ಣ ಪ್ರಮಾಣದ ಸರಕಾರ ಜಾರಿಗೆ ಬರದಿದ್ದಲ್ಲಿ ರಾಷ್ಟ್ರಪತಿ ಆಡಳಿತ ಹೇರಬೇಕು ಎಂದು ಪ್ರತಿಪಕ್ಷ ಬಿಜೆಪಿ ಶಿವಸೇನೆ ಒತ್ತಾಯಸಿಸಿವೆ.

ವಿಧಾನಸಭೆ ಚುನಾವಣೆಗಳ ಫಲಿತಾಂಶ ಹೊರಬಿದ್ದು 13 ದಿನಗಳು ಸಂದಿವೆ. ಮುಖ್ಯಮಂತ್ರಿಯಾಗಿ ಕಾಂಗ್ರೆಸ್ಸಿನ ಅಶೋಕ್ ಚವಾಣ್ ಮತ್ತು ಉಪಮುಖ್ಯಮಂತ್ರಿಯಾಗಿ ಎನ್ಸಿಪಿ ಛಗನ್ ಭುಜಬಲ್ ಆಯ್ಕೆಯಾಗಿದ್ದಾರೆ.ಯ ಆದರೆ, ಸಚಿವ ಸಂಪುಟ ವಿಸ್ತರಣೆಯಲ್ಲಿ ವಿಳಂಬವಾಗಿದೆ. ಉಭಯ ಪಕ್ಷಗಳು ನಿರ್ದಿಷ್ಟ ಖಾತೆಗಳು ಬೇಕು ಎಂದು ಪಟ್ಟು ಹಿಡಿದಿರುವುದು ಉಭಯ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ.

ಖಾತೆ ಹಂಚಿಕೆಗೆ ಸಂಬಂಧಿಸಿದಂತೆ ಬೇಸತ್ತಿರುವ ಎನ್ಸಿಪಿ ಕಾಂಗ್ರೆಸ್ ಪಕ್ಷ ನಾವು ಹೊರಗಿನಿಂದ ಬೆಂಬಲ ನೀಡಲು ಸಿದ್ದ ಎನ್ನುವ ಮಟ್ಟಕ್ಕೆ ಬಂದು ತಲುಪಿದೆ. ಆದರೆ, ಸ್ಪಷ್ಟನೆ ನೀಡಿರುವ ಮುಖ್ಯಮಂತ್ರಿ ಅಶೋಕ್ ಚವಾಣ್, 48 ಗಂಟೆಯೊಳಗೆ ಸಂಪೂರ್ಣ ಸರಕಾರ ಅಸ್ತಿತ್ವಕ್ಕೆ ಬರುತ್ತದೆ ಎಂದು ಹೇಳಿದ್ದಾರೆ. ಈ ಮಧ್ಯೆ ಪ್ರತಿಪಕ್ಷ ಬಿಜೆಪಿ ಮತ್ತು ಶಿವಸೇನೆ ರಾಜ್ಯಪಾಲರನ್ನು ಭೇಟಿ 24 ಗಂಟೆಯೊಳಗೆ ಸರಕಾರ ಜಾರಿಗೆ ಬರಬೇಕು. ಇಲ್ಲದಿದ್ದರೆ, ರಾಷ್ಟ್ರಪತಿ ಆಡಳಿಕ ಜಾರಿ ಮಾಡಿ ಎಂದು ಒತ್ತಾಯಿಸಿವೆ.

(ಏಜನ್ಸೀಸ್)

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X